ಬುಧವಾರ, ಸೆಪ್ಟೆಂಬರ್ 22, 2021
23 °C

ಅಲ್ಪಸಂಖ್ಯಾತ ಮೋರ್ಚಾದಿಂದ ಪ್ರಾರ್ಥನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಕೋವಿಡ್ 19 ದೃಢಪಟ್ಟಿರುವ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೇಗ ಗುಣಮುಖರಾಗಲಿ ಎಂದು ಇಲ್ಲಿನ ಮುಸ್ಲಿಂ ಸಮುದಾಯದ ಕೆಲವರು ಸೋಮವಾರ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದರು.

ಸಾಗರ ರಸ್ತೆಯಲ್ಲಿರುವ ಹಜ್ರತ್ ಸಯ್ಯದ್ ಶಾಲಿಮ್ಮಾ ದಿವಾನ್ ದರ್ಗಾದಲ್ಲಿ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಮುಖಂಡರು ಧಾರ್ಮಿಕ ಕಾರ್ಯಕ್ರಮ ನೆರವೇರಿಸಿ, ಕೋವಿಡ್ 19 ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಯಡಿಯೂರಪ್ಪ ಆದಷ್ಟು ಶೀಘ್ರ ಗುಣಮುಖರಾಗಿ, ನಾಡಿನ ಸೇವೆಗೆ ಬರಲಿ ಎಂದು ಪ್ರಾರ್ಥಿಸಿದರು. ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಅನೀಸ್ ತಹಸೀಲ್ದಾರ್ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು