ಬುಧವಾರ, ಜನವರಿ 19, 2022
18 °C

ಬಿಜೆಪಿಯವರು ಮನುಷ್ಯತ್ವ ಮೀರಿದವರು: ಹರಿಪ್ರಸಾದ್ ವಾಗ್ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಟ್ಕಳ: ‘ಬಿ.ಜೆ.ಪಿ.ಯವರು ಮನುಷ್ಯತ್ವ ಮೀರಿದವರು. ಅವರ ಚುನಾವಣಾ ಪ್ರಣಾಳಿಕೆಯೇ ಅದನ್ನು ಎತ್ತಿ ತೋರಿಸುತ್ತದೆ’ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ ಹರಿಹಾಯ್ದರು.

ಪಟ್ಟಣದಲ್ಲಿ ಮಂಗಳವಾರ ನಡೆದ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಕಾಂಗ್ರೆಸ್ ಪಕ್ಷವು ರಸ್ತೆ, ನೀರು, ಸೇತುವೆ ಬಗ್ಗೆ ಮಾತನಾಡಿದರೆ, ಬಿ.ಜೆ.ಪಿ.ಯವರು ಹಿಂದೂ ಮುಸ್ಲಿಂ, ಚೀನಾ, ಪಾಕಿಸ್ತಾನದ ಬಗ್ಗೆ ಮಾತನಾಡುತ್ತಾರೆ. ಇಂತಹ ಜನವಿರೋಧಿ, ಜನರ ಶಾಂತಿ ನೆಮ್ಮದಿ ಕೆಡಿಸುವ ಪಕ್ಷ ನಮಗೆ ಬೇಕೇ’ ಎಂದು ಪ್ರಶ್ನಿಸಿದರು.

‘ಈ ದೇಶದ ಸಂವಿಧಾನದ ಮೇಲೆ ನಂಬಿಕೆ ಇರದ ಬಿ.ಜೆ.ಪಿ.ಯವರು ಸಂವಿಧಾನ ಬದಲಾವಣೆ ಮಾಡುತ್ತೇವೆ ಎನ್ನುತ್ತಾರೆ. ಅವರಿಗೆ ಪಂಚಾಯಿತಿ ವ್ಯವಸ್ಥೆಯ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಸ್ಥಳೀಯ ಆಡಳಿತಗಳಿಗೆ ಅಧಿಕಾರ ನೀಡದೇ ಎಲ್ಲವನ್ನೂ ತಾವೇ ಕಬಳಿಸುತ್ತಿದ್ದಾರೆ’ ಎಂದು ದೂರಿದರು.

ಮುಖಂಡ ಮಂಕಾಳ ವೈದ್ಯ ಮಾತನಾಡಿ, ‘ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಲ್ಲಿ ಅಧಿಕಾರ ಕಳೆದುಕೊಳ್ಳುವ ಭಯದಿಂದ ಸರ್ಕಾರವು ಚುನಾವಣೆ ಮುಂದೂಡಿದೆ. ಈ ನೀತಿ ವಿರುದ್ಧ ಚುನಾವಣಾ ಆಯೋಗವು ನ್ಯಾಯಾಲಯದ ಮೊರೆ ಹೋಗಿದೆ. ಸ್ಥಳೀಯ ಆಡಳಿತಕ್ಕೆ ಅಧಿಕಾರ ನೀಡಲು ಮನಸ್ಸಿಲ್ಲದೇ ಅಧಿಕಾರಕ್ಕಾಗಿ ಬಿ.ಜೆ.ಪಿ.ಯರು ಸುಳ್ಳು ಹೇಳುತ್ತಾ ಸಾಮಾನ್ಯ ಜನರಿಗೆ ಮೋಸ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ ನಾಯ್ಕ, ಕಾಂಗ್ರೆಸ್ ಮುಖಂಡ ಮುಜಾಮಿಲ್, ಉತ್ತರ ಕನ್ನಡ ಜಿಲ್ಲಾ ಅಲ್ಪಸಂಖ್ಯಾತರ  ಘಟಕದ ಅಧ್ಯಕ್ಷ ಅಬ್ದುಲ್ ಮಜೀದ್, ಮುಖಂಡರಾದ ಜಯಶ್ರೀ ಮೊಗೇರ, ನಯನಾ ನಾಯ್ಕ, ಟಿ.ಡಿ.ನಾಯ್ಕ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು