ಶನಿವಾರ, ಡಿಸೆಂಬರ್ 4, 2021
26 °C

ದಾಂಡೇಲಿ: ಮೀನು ಹಿಡಿಯಲು ಕುಳಿತಿದ್ದ ಬಾಲಕನ ನೀರಿಗೆಳೆದೊಯ್ದ ಮೊಸಳೆ, ಹುಡುಕಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾಂಡೇಲಿ: ನಗರದ ಸಮೀಪ ಹರಿಯುವ ಕಾಳಿ ನದಿಯಿಂದ ಮೀನು ಹಿಡಿಯಲು ಭಾನುವಾರ ಗಾಳ ಹಾಕಿ ಕುಳಿತಿದ್ದ ಬಾಲಕನನ್ನು ಮೊಸಳೆ ಎಳೆದುಕೊಂಡು ಹೋಗಿದೆ. ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ವಿನಾಯಕ ನಗರದ ನಿವಾಸಿ ಮೊಹೀನ್ ಮೊಹಮ್ಮದ್ ಗುಲ್ಬರ್ಗ (15) ಮೊಸಳೆ ದಾಳಿಗೆ ಒಳಗಾದವನು. ಆತ ದಾಂಡೇಲಿಯ ಹಳಿಯಾಳ ರಸ್ತೆಯ ಕಾಳಿ ನದಿ ದಂಡೆಯಲ್ಲಿ ಬೆಳಿಗ್ಗೆ ಮೀನು ಹಿಡಿಯಲು ಕುಳಿತಿದ್ದ. ಇದ್ದಕ್ಕಿದ್ದಂತೆ ದಾಳಿ ಮಾಡಿದ ಮೊಸಳೆಯು ಅವನನ್ನು ಕಚ್ಚಿ ನೀರಿಗೆ ಎಳೆದೊಯ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯ ಜಂಗಲ್ ಲಾಡ್ಜ್ ರೆಸಾರ್ಟ್ ಸಿಬ್ಬಂದಿ ಬಾಲಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಶೋಧ ಕಾರ್ಯಕ್ಕೆ ಅನುಕೂಲವಾಗುವಂತೆ ಸೂಪಾ ಜಲಾಶಯದಿಂದ ನೀರಿನ ಹರಿವು ನಿಲ್ಲಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು