ಶಿರಸಿ: ತಾಲ್ಲೂಕಿನ ಕುಕ್ರಿ ಗ್ರಾಮದ ರೈತರರೊಬ್ಬರಿಂದ ಮನೆ ಸಂಖ್ಯೆ ನೀಡಲು ಲಂಚ ಪಡೆಯುತ್ತಿದ್ದ ವೇಳೆ ಜಾನ್ಮನೆ ಗ್ರಾಮ ಪಂಚಾಯ್ತಿ ಪಿಡಿಓ ಕೃಷ್ಣಪ್ಪ ಯಲಗಲಿ ಅವರನ್ನು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಸುಧೀಂದ್ರ ಹೆಗಡೆ ಎಂಬುವವರು 2014ರಲ್ಲಿ ಹೊಸ ಮನೆ ಕಟ್ಟಿಸಿದ್ದರು. ಅದಕ್ಕೆ ಸಂಖ್ಯೆ ನೀಡಲು ಪಿಡಿಓ ₹15 ಸಾವಿರ ಹಣದ ಬೇಡಿಕೆ ಇಟ್ಟಿದ್ದಾಗಿ ಸುಧೀಂದ್ರ ಎಸಿಬಿಗೆ ದೂರು ನೀಡಿದ್ದರು. ಶನಿವಾರ ಸುಧೀಂದ್ರ ಅವರು ಲಂಚ ನೀಡುವಾಗ ಗ್ರಾಮ ಪಂಚಾಯ್ತಿ ಕಚೇರಿಯಲ್ಲಿ ಪಿಡಿಓ ಅವರನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದರು.

ಎಸಿಬಿ ಡಿವೈಎಸ್ಪಿ ಶ್ರೀಕಾಂತ್ ನೇತೃತ್ವದಲ್ಲಿ ದಾಳಿ ನಡೆಯಿತು. ಪಿಡಿಓ ಮೇಲೆ ಈ ಹಿಂದೆಯೂ ಕೆಲ ದೂರು ಬಂದಿತ್ತು. ಈಗ ಸಾಕ್ಷಿ ಸಮೇತ ವಶಕ್ಕೆ ಪಡೆಯಲಾಯಿತು ಎಂದು ಶ್ರೀಕಾಂತ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.