ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಡ್ಲಗುಂಡಿ ಸೇತುವೆ ದುರಸ್ತಿ ಕಾರ್ಯ ಪೂರ್ಣ

Last Updated 18 ಜುಲೈ 2020, 16:54 IST
ಅಕ್ಷರ ಗಾತ್ರ

ಯಲ್ಲಾಪುರ: ಯಲ್ಲಾಪುರ ಹಾಗೂ ಮುಂಡಗೋಡ ತಾಲ್ಲೂಕುಗಳನ್ನುಬೆಸೆಯುವ ಶಿಡ್ಲಗುಂಡಿ ಸೇತುವೆಯ ಸಂಪರ್ಕ ರಸ್ತೆಯ ದುರಸ್ತಿ ಕಾಮಗಾರಿ ಪೂರ್ಣಗೊಂಡಿದೆ. ವಾಹನಗಳ ಸಂಚಾರಕ್ಕೆಇನ್ನೆರಡು ದಿನಗಳಲ್ಲಿ ತೆರೆದುಕೊಳ್ಳುವ ನಿರೀಕ್ಷೆಯಿದೆ.

ಕಳೆದ ವರ್ಷದ ಭಾರಿ ಮಳೆಯಿಂದ ಸೇತುವೆಯ ಸಂಪರ್ಕ ರಸ್ತೆ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿತ್ತು.ಸಚಿವ ಶಿವರಾಮ ಹೆಬ್ಬಾರ ಅವರ ಪ್ರಯತ್ನದಿಂದ ಹಣ ಮಂಜೂರಿಯಾಗಿ ಕಾಮಗಾರಿ ಕೈಗೊಳ್ಳಲಾಗಿತ್ತು.ಸೇತುವೆಯ ಎರಡೂಬದಿಗಳಲ್ಲಿ ಕಾಂಕ್ರೀಟ್‌ ಬಳಸಿ ದುರಸ್ತಿ ಮಾಡಲಾಗಿದೆ. ಕಾಂಕ್ರೀಟ್‌ನ ಮೇಲೆ ನೀರು ಬಿದ್ದು ಕೆಳಗೆ ಹರಿದು ಹೋಗುವಂತಹ ವಿನ್ಯಾಸ ಮಾಡಲಾಗಿದೆ. ಮುಂದಿನ ದಿನಗಳಲ್ಲಿಭಾರಿಮಳೆ ಸುರಿದು ಸೇತುವೆಯ ಮೇಲೆ ನೀರು ಹರಿದರೆಅಂಚಿನಲ್ಲಿ ಮಣ್ಣು ಕೊಚ್ಚಿ ಹೋಗದಂತೆ ನಿರ್ಮಾಣ ಮಾಡಲಾಗಿದೆ.

ಪ್ರತಿದಿನ ನೂರಾರು ನೌಕರರು, ಶಾಲಾ ಮಕ್ಕಳು, ವ್ಯವಹಾರಕ್ಕೆ ಪೇಟೆಗೆ ಬರುವವರು ಇದನ್ನು ಬಳಸಿಕೊಳ್ಳಬೇಕಾಗಿದೆ. ಹೀಗಾಗಿ ಮಳೆಗಾಲದಲ್ಲಿ ತಾತ್ಕಾಲಿಕ ಸೇತುವೆಯ ಮೇಲೆ ನೀರು ಹರಿಯುವುದರಿಂದ ಎರಡೂ ಪಟ್ಟಣಗಳ ಸಂಪರ್ಕ ಕಡಿತಗೊಳ್ಳುತ್ತಿತ್ತು. ಸೇತುವೆಯ ದುರಸ್ತಿ ಕಾರ್ಯ ಸಂಪೂರ್ಣವಾಗಿ ಮುಕ್ತಾಯವಾದ ಕಾರಣಎರಡೂತಾಲ್ಲೂಕುಗಳ ಜನ ನಿಟ್ಟುಸಿರು ಬಿಡುವಂತಾಗಿದೆ ಎಂದು ಸ್ಥಳೀಯ ನಿವಾಸಿಗಳಾದ ಪ್ರಕಾಶ ಮಹಾಲೆ ಮತ್ತು ಮಂಜುನಾಥ ಭಟ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT