ಅಂಕೋಲಾ: ತಾಲ್ಲೂಕಿನ ಮಾಸ್ತಿಕಟ್ಟಾ ಬಳಿ ಶನಿವಾರ ನಸುಕಿನಲ್ಲಿ, ನಿಂತ ಲಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ವಿವರ ತಿಳಿದುಬಂದಿಲ್ಲ. ಅಪಘಾತದಲ್ಲಿ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಆನಂದ್ ಟ್ರಾವೆಲ್ಸ್ ಸಂಸ್ಥೆಯ ಬಸ್ ಬೆಂಗಳೂರಿನಿಂದ ಗೋವಾಕ್ಕೆ ಸಂಚರಿಸುತ್ತಿತ್ತು. ಮುಂದಿನ ಟಯರ್ ಸಮಸ್ಯೆಯಿಂದ ದುರಸ್ತಿಗೆಂದು ರಸ್ತೆ ಪಕ್ಕದಲ್ಲಿ ಲಾರಿಯನ್ನು ನಿಲ್ಲಿಸಲಾಗಿತ್ತು. ಅದರ ಹಿಂಭಾಗಕ್ಕೆ ಬಸ್ ಡಿಕ್ಕಿಯಾಯಿತು. ಗಾಯಾಳುಗಳಿಗೆ ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಂಭೀರವಾಗಿ ಗಾಯಗೊಂಡಿರುವ ಒಬ್ಬರನ್ನು ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿ.ಪಿ.ಐ ಕೃಷ್ಣಾನಂದ ನಾಯಕ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಪಿ.ಎಸ್.ಐ ಈ.ಸಿ.ಸಂಪತ್, ಎ.ಎಸ್.ಐ ಅಶೋಕ್ ತಳಗಪ್ಪನವರ್ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.