ಬುಧವಾರ, ಅಕ್ಟೋಬರ್ 20, 2021
25 °C

ಕರ್ತವ್ಯದಲ್ಲಿದ್ದ ನಿರ್ವಾಹಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಸಿ: ಕರ್ತವ್ಯ ನಿರ್ವಹಣೆ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾದ ಧರ್ಮಸ್ಥಳ ಸಾರಿಗೆ ಘಟಕದ ಬಸ್ ನಿರ್ವಾಹಕರೊಬ್ಬರು ಸೋಮವಾರ ರಾತ್ರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಉಜಿರೆಯ ಅವ್ವಪ್ಪ ಬಗಳೂರು (49) ಮೃತ ನಿರ್ವಾಹಕರು. ಧರ್ಮಸ್ಥಳದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಬಸ್‍ನಲ್ಲಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಇಲ್ಲಿನ ಕೋಟೆಕೆರೆ ಸಮೀಪ ಬಸ್ ತೆರಳುತ್ತಿದ್ದಾಗ ಎದೆ ನೋವು ತಡೆಯಲಾರದೆ ಚೀರಾಡಿದ್ದರು. ಅವರನ್ನು ಆಟೊದಲ್ಲಿ ಸರ್ಕಾರಿ ಆಸ್ಪತ್ರೆಗೆ ಸ್ಥಳೀಯರು ಕರೆದೊಯ್ದಿದ್ದರು. ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ಶಿರಸಿ ಸಾರಿಗೆ ಘಟಕದ ಸಿಬ್ಬಂದಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು