ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲ್ಲಾಪುರ ಮತ ಎಣಿಕೆ ಕೇಂದ್ರದತ್ತ ಎಲ್ಲರ ಚಿತ್ತ

ಯಲ್ಲಾಪುರ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ: ಕುತೂಹಲಕ್ಕೆ ಇಂದು ತೆರೆ
Last Updated 9 ಡಿಸೆಂಬರ್ 2019, 5:13 IST
ಅಕ್ಷರ ಗಾತ್ರ

ಶಿರಸಿ: ಡಿ.5ರಂದು ಯಲ್ಲಾಪುರ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯ ಮತ ಎಣಿಕೆ ಕಾರ್ಯ ಇಂದು (ಡಿ.9) ನಡೆಯಲಿದೆ. ಪೊಲೀಸ್ ಕಾವಲಿನಲ್ಲಿ ಮತ ಪೆಟ್ಟಿಗೆ ಭದ್ರವಾಗಿಟ್ಟಿರುವ ಇಲ್ಲಿನ ಎಂಇಎಸ್ ಕಾಮರ್ಸ್ ಕಾಲೇಜಿನಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದೆ.

ಮತ ಎಣಿಕೆ ಕೇಂದ್ರದ ಸುತ್ತ ಮೂರು ಸುತ್ತಿನ ಭದ್ರತೆ ವ್ಯವಸ್ಥೆಯಿದೆ. ಸುತ್ತಲಿನ 100 ಮೀಟರ್ ಆವರಣದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು ಯಾವುದೇ ವಾಹನಗಳಿಗೆ ಪ್ರವೇಶವಿಲ್ಲ. ಚುನಾವಣಾಧಿಕಾರಿ ನೀಡಿರುವ ಪ್ರವೇಶ ಪತ್ರಗಳನ್ನು ಹೊಂದಿರುವ ಎಣಿಕೆ ಸಿಬ್ಬಂದಿ, ಅಭ್ಯರ್ಥಿಗಳು, ಚುನಾವಣಾ ಏಜೆಂಟರಿಗೆ ಮಾತ್ರ ಎಣಿಕೆ ಕೇಂದ್ರದ ನಿರ್ದಿಷ್ಟ ಪ್ರದೇಶಗಳಿಗೆ ಪ್ರವೇಶಕ್ಕೆ ಅವಕಾಶವಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ. ಹರೀಶಕುಮಾರ್ ತಿಳಿಸಿದ್ದಾರೆ.

ಪ್ರತಿ ಟೇಬಲ್‌ನಲ್ಲಿ ಒಬ್ಬರು ಮೇಲ್ವಿಚಾರಕ, ಹೆಚ್ಚುವರಿ ಎಣಿಕೆ ಸಿಬ್ಬಂದಿ, ಎಣಿಕೆ ಸಹಾಯಕ ಹಾಗೂ ಒಬ್ಬರು ಸಹಾಯಕರು ಇರಲಿದ್ದಾರೆ. ಆಯ್ಕೆ ಮಾಡುವ ಐದು ಮತದಾನ ಖಾತ್ರಿಗಳ ಯಂತ್ರ ಎಣಿಕೆ ಹಾಗೂ ಅಂಚೆ ಮತಗಳ ಎಣಿಕೆ ಚುನಾವಣಾ ವೀಕ್ಷಕರ ಸಮ್ಮುಖದಲ್ಲಿ ನಡೆಯಲಿದೆ.ಸಾರ್ವಜನಿಕರಿಗೆ ಮತ ಎಣಿಕೆಯ ಕ್ಷಣಕ್ಷಣದ ಸುದ್ದಿಗಳನ್ನು ನೀಡುವ ಸಲುವಾಗಿ ಮಾಧ್ಯಮ ಕೇಂದ್ರವನ್ನು ತೆರೆಯಲಾಗಿದೆ ಎಂದು ತಿಳಿಸಿದರು.

ಮತ ಎಣಿಕೆ ಕೇಂದ್ರದ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಸಿ.ಸಿ.ಟಿ.ವಿ ಕ್ಯಾಮೆರಾ ಮೂಲಕ ದಾಖಲಿಸಲಾಗುತ್ತದೆ. ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಆಗದಂತೆ ನಿಗಾವಹಿಸಲಾಗಿದೆ. ಮತ ಎಣಿಕೆ ಸಿಬ್ಬಂದಿಗೆ ಭಾನುವಾರ ಎರಡನೇ ಸುತ್ತಿನ ತರಬೇತಿ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮತ ಕ್ಷೇತ್ರದಾದ್ಯಂತ ಮತ ಎಣಿಕೆ ದಿನ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಿಸಲಾಗಿದೆ. ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಳನ್ನು ಭಾರತ ಚುನಾವಣಾ ಆಯೋಗದ ವೆಬ್ಸೈಟ್ http://results.eci.gov.inನಲ್ಲಿ ಸಾರ್ವಜನಿಕರು ನೋಡಬಹುದು ಎಂದು ಅವರು ತಿಳಿಸಿದರು.

ಚುನಾವಣಾಧಿಕಾರಿ ಸಭೆ:ಮತ ಎಣಿಕೆ ಸಂಬಂಧ ಚುನಾವಣಾಧಿಕಾರಿ ಡಾ.ಈಶ್ವರ ಉಳ್ಳಾಗಡ್ಡಿ ಅವರು ಅಭ್ಯರ್ಥಿಗಳು ಮತ್ತು ರಾಜಕೀಯ ಪಕ್ಷಗಳ ಸಭೆಯನ್ನು ಭಾನುವಾರ ಇಲ್ಲಿ ನಡೆಸಿದರು. ಮತ ಎಣಿಕೆಯ ಸಂದರ್ಭದಲ್ಲಿ ಶಾಂತತೆ ಕಾಪಾಡಿಕೊಳ್ಳುವಂತೆ, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ, ಅಧಿಕಾರಿ, ಸಿಬ್ಬಂದಿಗೆ ಸಹಕಾರ ನೀಡುವಂತೆ ಕೋರಿದರು. ತಹಶೀಲ್ದಾರ್ ಎಂ.ಆರ್.ಕುಲಕರ್ಣಿ, ಡಿವೈಎಸ್‌ಪಿ ವ್ಯಾಲೆಂಟೈನ್ ಡಿಸೋಜಾ, ಪೊಲೀಸ್ ನಿರೀಕ್ಷಕ ಗಿರೀಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT