ಭಾನುವಾರ, ನವೆಂಬರ್ 29, 2020
22 °C

ಕಾರವಾರ: ಸೇತುವೆಯಿಂದ ಬಿದ್ದ ಕಾರು, ಸ್ಥಳದಲ್ಲೇ ಇಬ್ಬರ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ನಗರದ ಲಂಡನ್ ಬ್ರಿಜ್ ಬಳಿ ಮಂಗಳವಾರ ಬೆಳಿಗ್ಗೆ ಸೇತುವೆಯಿಂದ ಸುಮಾರು 20 ಅಡಿ ಆಳಕ್ಕೆ ಕಾರೊಂದು ಬಿದ್ದು ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತರನ್ನು ಚಿಕ್ಕಮಗಳೂರಿನ ಕಿರಣ್ (28) ಹಾಗೂ ರಾಕೇಶ್ ಸಿ.ಆರ್ (28) ಎಂದು ಗುರುತಿಸಲಾಗಿದೆ.

ಕಾರಿನಲ್ಲಿದ್ದ ಮತ್ತಿಬ್ಬರಿಗೆ ಗಾಯಗಳಾಗಿದ್ದು,  ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕಾರು ಅಂಕೋಲಾದಿಂದ ಗೋವಾ ಕಡೆಗೆ ಹೋಗುತ್ತಿದ್ದಾಗ ಈ ಅವಘಡ ನಡೆದಿದೆ. ಕಾರವಾರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಳೆದ ವರ್ಷವೂ ಇದೇ ಜಾಗದಲ್ಲಿ ಎರಡು ವಾಹನಗಳು ಬಿದ್ದು, ಚಾಲಕರು ಹಾಗೂ ಪ್ರಯಾಣಿಕರು ಗಾಯಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು