ಅರಣ್ಯಾಧಿಕಾರಿಯಿಂದ ಸುಳ್ಳು ವರದಿ: ಆರೋಪ

ಬುಧವಾರ, ಮೇ 22, 2019
29 °C
ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಿದ್ದಾಗಿ ಸರ್ಕಾರಕ್ಕೆ ಮಾಹಿತಿ: ರವೀಂದ್ರ ನಾಯ್ಕ

ಅರಣ್ಯಾಧಿಕಾರಿಯಿಂದ ಸುಳ್ಳು ವರದಿ: ಆರೋಪ

Published:
Updated:
Prajavani

ಕಾರವಾರ: ಜಿಲ್ಲೆಯಲ್ಲಿ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಿ ಅರಣ್ಯ ಜಮೀನನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಶಿರಸಿಯ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸತ್ಯಕ್ಕೆ ದೂರವಾದ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಪ್ರಮುಖರು ಆಗ್ರಹಿಸಿದ್ದಾರೆ.

ಈ ಸಂಬಂಧ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು. ಬಳಿಕ ಮಾತನಾಡಿದ ರವೀಂದ್ರ ನಾಯ್ಕ, ‘ಸರ್ಕಾರಕ್ಕೆ ಕಳುಹಿಸಿದ ವರದಿಯಂತೆ ಜಿಲ್ಲೆಯಲ್ಲಿ ಜನವರಿ ಅಂತ್ಯದವರೆಗೆ ಒಟ್ಟು 5,621 ಕುಟುಂಬದವರನ್ನು ಒಕ್ಕಲೆಬ್ಬಿಸಲಾಗಿದೆ. ಅವರಿಂದ 3,159.35 ಹೆಕ್ಟೇರ್ ಅರಣ್ಯ ಪ್ರದೇಶವನ್ನು ವಶಪಡಿಸಿಕೊಳ್ಳಲಾಗಿದೆ. ಆದರೆ, ಇದು ವಾಸ್ತವಕ್ಕೆ ವಿರುದ್ಧವಾಗಿದೆ. ಈ ವರದಿಯಿಂದ ಅರಣ್ಯವಾಸಿಗಳಿಗೆ ಸಮಸ್ಯೆಯಾಗಲಿದೆ’ ಎಂದು ದೂರಿದರು.

ವರದಿಯ ಪ್ರಕಾರ, ಹೊನ್ನಾವರ ವಲಯದಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು 2,765 ಕುಟುಂಬಗಳಿಂದ 905.58 ಹೆಕ್ಟೇರ್ ಅರಣ್ಯ ಪ್ರದೇಶವನ್ನು ವಶಪಡಿಸಿಕೊಳ್ಳಲಾಗಿದೆ. ಶಿರಸಿ ವಲಯದಲ್ಲಿ 1,573 ಕುಟುಂಬಗಳ 614.41 ಹೆಕ್ಟೇರ್, ಯಲ್ಲಾಪುರ ವಲಯದಲ್ಲಿ 733 ಕುಟುಂಬಗಳ 1,309.18 ಹೆಕ್ಟೇರ್, ಹಳಿಯಾಳದಲ್ಲಿ 366 ಕುಟುಂಬಗಳ 313.12 ಹೆಕ್ಟೇರ್, ಕಾರವಾರದಲ್ಲಿ 179 ಕುಟುಂಬಗಳ 16.95 ಹೆಕ್ಟೇರ್ ಹಾಗೂ ದಾಂಡೇಲಿ ವನ್ಯಜೀವಿ ವಲಯದ ಐದು ಕುಟುಂಬಗಳಿಗೆ ಸಂಬಂಧಿಸಿದ 0.11 ಹೆಕ್ಟೇರ್ ಜಮೀನು ವಶಪಡಿಸಿಕೊಂಡಿದ್ದಾಗಿ ತಿಳಿಸಲಾಗಿದೆ. 

ಇದು ಕಾಲ್ಪನಿಕ ವರದಿಯಾಗಿದೆ. ಈ ಸಂಬಂಧ ಸಾಕಷ್ಟು ಬಾರಿ ಪ್ರತಿಭಟನೆ ಮಾಡಿದ್ದರೂ ಅರಣ್ಯಾಧಿಕಾರಿಗಳು ಪ್ರತಿ ತಿಂಗಳು ಇದೇ ರೀತಿಯ ಸುಳ್ಳು ವರದಿಯನ್ನು ಕಳುಹಿಸುತ್ತಿದ್ದಾರೆ. ಆದ್ದರಿಂದ ವರದಿಯಲ್ಲಿರುವ ಸತ್ಯಾಸತ್ಯತೆಯನ್ನು ಅರಿಯಲು ಪೂರ್ಣ ಪ್ರಮಾಣದ ವಿಚಾರಣೆ ನಡೆಸಬೇಕು ಎಂದು ರವೀಂದ್ರ ನಾಯ್ಕ ಆಗ್ರಹಿಸಿದ್ದಾರೆ.

ಮನವಿ ಸ್ವೀಕರಿಸಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್, ವರದಿಯ ಕುರಿತು ಸಮಗ್ರವಾಗಿ ವಿಚಾರಿಸುವ ಭರವಸೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ವಿವಿಧ ಭಾಗಗಳಿಂದ ಬಂದಿದ್ದ ಅರಣ್ಯ ಅತಿಕ್ರಮಣಕಾರರು ಇದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !