ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸಿ ತಾಣಗಳಿಗೆ ಸಿಇಒ ಭೇಟಿ

Last Updated 5 ಆಗಸ್ಟ್ 2022, 2:11 IST
ಅಕ್ಷರ ಗಾತ್ರ

ಹೊನ್ನಾವರ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಿಯಾಂಗಾ ಎಂ. ಗುರುವಾರ ತಾಲ್ಲೂಕಿನ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿ ಅಲ್ಲಿ ಮೂಲ ಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಕಾಸರಕೋಡ ಇಕೋ ಬೀಚ್ ನಲ್ಲಿ ಪಾರ್ಕಿಂಗ್ ವ್ಯವಸ್ಥೆ ಸುಧಾರಣೆಗೆ ಕ್ರಮ ತೆಗೆದುಕೊಳ್ಳಬೇಕು, ಹೆರಂಗಡಿ ಮತ್ತು ಕುರ್ವೆ ಸಂಪರ್ಕ ಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಅವರು ಸೂಚನೆ ನೀಡಿದರು.

ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನೀರು ಪರೀಕ್ಷಣಾ ಪ್ರಯೋಗಾಲಯಕ್ಕೆ ಭೇಟಿ ನೀಡಿದ ಅವರು, 2021-22ನೇ ಸಾಲಿನಲ್ಲಿ ಜೆಎಂಎಂ ಯೋಜನೆಯಡಿ ಕೈಗೆತ್ತಿಕೊಳ್ಳಲಾದ 6 ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ನಿರ್ದೇಶಿಸಿದರು.

ಐತಿಹಾಸಿಕ ತಾಣವಾದ ನಗರಬಸ್ತಿಕೇರಿಗೂ ಅವರು ಭೇಟಿ ನೀಡಿ ಅಲ್ಲಿ ಪ್ರವಾಸಿಗರಿಗೆ ಲಭ್ಯವಿರುವ ಮೂಲಸೌಕರ್ಯಗಳನ್ನು ಪರಿಶೀಲಿಸಿದರು. ತಾಲ್ಲೂಕಿನಲ್ಲಿ ನೆರೆ ಪರಿಸ್ಥಿತಿಯನ್ನು ಉತ್ತಮವಾಗಿ ನಿಭಾಯಿಸಿರುವ ಅಧಿಕಾರಿಗಳ ಕಾರ್ಯಕ್ಷಮತೆಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಇಒ ಸುರೇಶ ನಾಯ್ಕ, ಎನ್.ಆರ್.ಇ.ಜಿ. ಸಹಾಯಕ ನಿರ್ದೇಶಕ ಕೃಷ್ಣಾನಂದ ಕೆ.ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಜಯಂತ, ಎಇಇ ಪ್ರಕಾಶ, ರಾಜೀವ ನಾಯ್ಕಪ್ರದೀಪ ಆಚಾರಿ, ಹೆರಂಗಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಮೋದ ನಾಯ್ಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT