ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುನ್ನೆಚ್ಚರಿಕೆಯಲ್ಲಿ ಸಿಇಟಿ: ವಿದ್ಯಾರ್ಥಿಗಳ ಆರೋಗ್ಯ ಪರಿಶೀಲನೆ

Last Updated 30 ಜುಲೈ 2020, 4:33 IST
ಅಕ್ಷರ ಗಾತ್ರ

ಕಾರವಾರ: ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯಲಿರುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಸಾಕಷ್ಟು ಮುಂಚಿತವಾಗಿಯೇ ಬಂದಿದ್ದಾರೆ. ವಿದ್ಯಾರ್ಥಿಗಳ ದೇಹದ ಉಷ್ಣತೆಯನ್ನು ಪರೀಕ್ಷಿಸಿ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುತ್ತಿದೆ.

ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ತೆರೆಯಲಾಗಿರುವ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಸುಮಾರು ಎರಡು ತಾಸು ಮುಂಚಿತವಾಗಿಯೇ ಬಂದಿದ್ದರು. ಪರೀಕ್ಷೆಯು 10.30ರಿಂದ ನಡೆಯಲಿದೆ.

ಕೊರೊನಾ ವೈರಸ್ ಹಾವಳಿಯ ಕಾರಣದಿಂದ ಈ ಬಾರಿ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಲಾಗಿದೆ. ಕೋವಿಡ್ ಧೃಢಪಟ್ಟ ವಿದ್ಯಾರ್ಥಿಗಳಿಗೆ ಜಿಲ್ಲಾ ಆಸ್ಪತ್ರೆಯ ಪ್ರತ್ಯೇಕ ಕೋವಿಡ್ ಆರೈಕೆ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಉಳಿದಂತೆ, ಎಲ್ಲ ವಿದ್ಯಾರ್ಥಿಗಳು ಮುಖಗವಸು ಧರಿಸುವುದು, ಸ್ಯಾನಿಟೈಸರ್ ಬಳಕೆ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT