ಶುಕ್ರವಾರ, ಮೇ 29, 2020
27 °C

ದಾಖಲೆಯಿಲ್ಲದೇ ಹಣ ಸಾಗಣೆ: ಸಿವಿಲಿಯನ್ ಸಿಬ್ಬಂದಿ ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ದಾಖಲೆಗಳಿಲ್ಲದೇ ಸೂಟ್‌ಕೇಸ್‌ನಲ್ಲಿ ಹಣ ಸಾಗಿಸುತ್ತಿದ್ದ ಸಿವಿಲಿಯನ್ ವಿಭಾಗದ ಸಿಬ್ಬಂದಿಯೊಬ್ಬರನ್ನು ಇಲ್ಲಿನ ಸೀಬರ್ಡ್ ನೌಕಾಪಡೆಯ ಪೊಲೀಸರು ಶನಿವಾರ ಬೆಳಿಗ್ಗೆ ವಶಕ್ಕೆ ಪಡೆದಿದ್ದಾರೆ.

ಅವರು ನೌಕಾನೆಲೆಯ ಮಿಲಿಟರಿ ಎಂಜಿನಿಯರಿಂಗ್ ಸರ್ವಿಸ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಸೂಟ್‌ಕೇಸ್ ಹಿಡಿದುಕೊಂಡು ನೌಕಾನೆಲೆಯಿಂದ ಹೊರಗೆ ಬರುತ್ತಿದ್ದ ವೇಳೆ ಅವರನ್ನು, ಮೊದಲೇ ಸಿಕ್ಕಿದ ಸುಳಿವಿನ ಆಧಾರದಲ್ಲಿ ತಡೆದು ನಿಲ್ಲಿಸಿ ಪರಿಶೀಲಿಸಿದಾಗ ವಿಚಾರ ಬೆಳಕಿಗೆ ಬಂತು.

ಸಿಬ್ಬಂದಿಯ ವಿರುದ್ಧ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಎಷ್ಟು ಹಣವಿದೆ, ಎಲ್ಲಿಂದ ಎಲ್ಲಿಗೆ ಸಾಗಿಸಲಾಗುತ್ತಿತ್ತು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು