ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಕನ್ನಡ ಜಿಲ್ಲೆಯಲ್ಲಿ ರಸ್ತೆಗಳ ದುರಸ್ತಿಗೆ ₹210 ಕೋಟಿ: ಬೊಮ್ಮಾಯಿ ಘೋಷಣೆ

Last Updated 29 ಜುಲೈ 2021, 14:28 IST
ಅಕ್ಷರ ಗಾತ್ರ

ಕಾರವಾರ: ‘ಪ್ರವಾಹ ಮತ್ತು ಭೂಕುಸಿತದಿಂದ ಹಾನಿಗೀಡಾಗಿರುವ ಉತ್ತರ ಕನ್ನಡದ ರಸ್ತೆಗಳ ತಕ್ಷಣದ ದುರಸ್ತಿಗೆ ಒಟ್ಟು ₹210 ಕೋಟಿ ಬಿಡುಗಡೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಜಿಲ್ಲೆಯ ಯಲ್ಲಾಪುರ ಮತ್ತು ಅಂಕೋಲಾ ತಾಲ್ಲೂಕುಗಳ ವಿವಿಧೆಡೆ ಮಳೆ ಮತ್ತು ಭೂಕುಸಿತದಿಂದ ಹಾನಿಗೀಡಾದ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ಅವರು, ಅಂಕೋಲಾದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.

‘ಲೋಕೋಪಯೋಗಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಗಳ ರಸ್ತೆಗಳ ದುರಸ್ತಿಗೆ ತಲಾ ₹100 ಕೋಟಿಯನ್ನು ತಕ್ಷಣ ಬಿಡುಗಡೆ ಮಾಡಲಾಗುವುದು. ಅರಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಆಗಿರುವ ಭೂ ಕುಸಿತ ದುರಸ್ತಿಗೆ ರಾಜ್ಯ ಸರ್ಕಾರದಿಂದ ₹ 6 ಕೋಟಿ ಮತ್ತು ಇಲ್ಲಿ ಮಳೆ ನೀರು ಹರಿಯುವ ಚರಂಡಿ ದುರಸ್ತಿಗೆ ₹ 4 ಕೋಟಿ ಬಿಡುಗಡೆ ಮಾಡಲಾಗುವುದು’ ಎಂದು ತಿಳಿಸಿದರು.

‘ಈ ಬಗ್ಗೆ ತಕ್ಷಣವೇ ಅಂದಾಜು ಪಟ್ಟಿ ಕಳುಹಿಸಿಕೊಡಿ. ಈ ಹಣವನ್ನು ಬಳಸಿಕೊಂಡು ತುರ್ತು ಕಾಮಗಾರಿಗಳನ್ನು ಮಾಡಿ ಗ್ರಾಮೀಣ ಭಾಗಗಳಿಗೆ ರಸ್ತೆ ಸಂಪರ್ಕ ಕೊಡಿ. ಅಕ್ಟೋಬರ್‌ನಿಂದ ಪೂರ್ಣ ಪ್ರಮಾಣದಲ್ಲಿ ಕಾಮಗಾರಿ ಮಾಡಬಹುದು. ಆಗ ವಿವರವಾದ ಅಂದಾಜು ಪಟ್ಟಿ ಸಲ್ಲಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

‘ಅರಬೈಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ 63ರ ಪುನರ್ ನಿರ್ಮಾಣಕ್ಕೆ ₹35 ಕೋಟಿ ಬೇಕು ಎಂದು ಅಂದಾಜು ಮಾಡಲಾಗಿದೆ. ಕೇಂದ್ರ ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ ಪ್ರಸ್ತಾಪ ಸಲ್ಲಿಸಲಾಗುವುದು’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT