ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿ.ಎಂ. ಕಾರವಾರ ಭೇಟಿ ವೇಳೆ ಆಸ್ಪತ್ರೆ ಘೋಷಣೆ; ಸಚಿವ ಕೋಟ

Last Updated 27 ಜುಲೈ 2022, 12:29 IST
ಅಕ್ಷರ ಗಾತ್ರ

ಶಿರಸಿ: ‘ಆಗಸ್ಟ್ ಎರಡನೇ ವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರವಾರಕ್ಕೆ ಭೇಟಿ ನೀಡಲಿದ್ದಾರೆ. ಅಷ್ಟರೊಳಗೆ ಕುಮಟಾದಲ್ಲಿ ಜಾಗ ಅಂತಿಮವಾದರೆ ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ಸ್ಥಾಪನೆ ಕುರಿತು ಅಧಿಕೃತ ಘೋಷಣೆ ಮಾಡಲಿದ್ದಾರೆ’ ಎಂದು ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು.

ಪಕ್ಷದ ಜಿಲ್ಲಾ ಕಾರ್ಯಕಾರಿಣಿ ಸಭೆ ನಿಮಿತ್ತ ಬುಧವಾರ ನಗರಕ್ಕೆ ಭೇಟಿ ನೀಡಿದ್ದ ಅವರು ಮಾಧ್ಯಮದವರ ಜತೆ ಮಾತನಾಡಿದರು.

‘ಆ.7 ಅಥವಾ 8ಕ್ಕೆ ಮುಖ್ಯಮಂತ್ರಿ ಜಿಲ್ಲೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ಈ ವೇಳೆ ಅವರು ಕಾರವಾರ ಮೆಡಿಕಲ್ ಕಾಲೇಜ್‍ನಲ್ಲಿ ಟ್ರಾಮಾ ಸೆಂಟರ್ ಕಾಮಗಾರಿಗೆ ಚಾಲನೆ ನೀಡಲಿದ್ದಾರೆ. ಜತೆಗೆ ಹೆಂಜಾ ನಾಯ್ಕ ಸೇನಾ ಪೂರ್ವ ವಸತಿ ಶಾಲೆ, ಬ್ರಹ್ಮಶ್ರೀ ನಾರಾಯಣ ಗುರು ವಸತಿ ಶಾಲೆ ಕಾಮಗಾರಿಗಳಿಗೂ ಚಾಲನೆ ಕೊಡಲಿದ್ದಾರೆ’ ಎಂದರು.

‘ಆಸ್ಪತ್ರೆ ಸ್ಥಾಪನೆಗೆ ಕುಮಟಾದಲ್ಲಿ ಕನಿಷ್ಠ 15 ಎಕರೆ ಜಾಗ ಗುರುತಿಸಲು ಜಿಲ್ಲಾಧಿಕಾರಿಗೆ ಸೂಚಿಸಲಾಗಿದೆ. ಶಿರಸಿ ಆಸ್ಪತ್ರೆಗೂ ಹೆಚ್ಚಿನ ಸೌಲಭ್ಯ ಒದಗಿಸಲಾಗುವುದು. ಜಿಲ್ಲೆಯಲ್ಲಿ ವೈದ್ಯರಿಲ್ಲದ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೂ ಹುದ್ದೆ ಭರ್ತಿಗೆ ಪ್ರಯತ್ನಿಸುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT