ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ: ಸೀಬರ್ಡ್ ನೌಕಾನೆಲೆಗೆ ಅಡ್ಮಿರಲ್ ಕರಂಬೀರ್ ಸಿಂಗ್ ಭೇಟಿ

Last Updated 22 ಅಕ್ಟೋಬರ್ 2020, 11:12 IST
ಅಕ್ಷರ ಗಾತ್ರ

ಕಾರವಾರ: ‘ಪ್ರಸ್ತುತ ದೇಶಕ್ಕೆ ಎದುರಾಗಿರುವ ಭದ್ರತಾ ಬೆದರಿಕೆಗಳು ಹಾಗೂ ಕೋವಿಡ್ 19 ಸಾಂಕ್ರಾಮಿಕ ಸೋಂಕಿನ ವಿರುದ್ಧ ಸದಾ ಸಮರ ಸನ್ನದ್ಧವಾಗಿರಬೇಕು’ ಎಂದು ನೌಕಾಪಡೆಯ ಸಿಬ್ಬಂದಿ ವಿಭಾಗದ ಮುಖ್ಯಸ್ಥ (ಸಿ.ಎನ್.ಎಸ್) ಅಡ್ಮಿರಲ್ ಕರಂಬೀರ್ ಸಿಂಗ್ ಸೀಬರ್ಡ್ ನೌಕಾನೆಲೆಯ ಸಿಬ್ಬಂದಿಗೆ ಕಿವಿಮಾತು ಹೇಳಿದರು.

ನೌಕಾನೆಲೆಗೆ ಗುರುವಾರ ಭೇಟಿ ನೀಡಿದ ಅವರು ನೌಕಾಪಡೆಯ ಅಧಿಕಾರಿಗಳು ಮತ್ತು ಇತರ ಸಿಬ್ಬಂದಿಯನ್ನು ಉದ್ದೇಶಿಸಿ ಮಾತನಾಡಿದರು.

ಕೋವಿಡ್ 19 ಲಾಕ್‌ಡೌನ್ ಅವಧಿಯಲ್ಲೂ ನೌಕಾನೆಲೆಯನ್ನು ಕಾರ್ಯಾಚರಣೆಗೆ ಸೂಕ್ತವಾದ ರೀತಿಯಲ್ಲಿ ನಿರ್ವಹಿಸಿದ ಸಿಬ್ಬಂದಿಯ ಕಾರ್ಯವೈಖರಿಯನ್ನು ಅವರು ಶ್ಲಾಘಿಸಿದರು. ಅಲ್ಲದೇ ದುರಸ್ತಿ ಯಾರ್ಡ್‌ನಲ್ಲಿ ನೌಕೆಗಳು ಮತ್ತು ಸಬ್‌ಮರೀನ್‌ಗಳ ದುರಸ್ತಿ ಹಾಗೂ ನಿರ್ವಹಣಾ ಕಾರ್ಯಗಳಿಗೆ ದೊರೆತ ಸಹಕಾರಕ್ಕೆ ಅಭಿನಂದನೆ ಸಲ್ಲಿಸಿದರು.

ಇದೇವೇಳೆ, ಉತ್ತರ ಕನ್ನಡ ಜಿಲ್ಲೆಯ ಕೋವಿಡ್ 19 ಪೀಡಿತರ ಚಿಕಿತ್ಸೆಯಲ್ಲಿ ಕಾರವಾರದ ಐ.ಎನ್.ಎಸ್. ಪತಂಜಲಿ ಆಸ್ಪತ್ರೆಯ ಕೊಡುಗೆಯನ್ನು ಅವರು ಸ್ಮರಿಸಿದರು. ಸಶಸ್ತ್ರ ಪಡೆಗಳ ಆಸ್ಪತ್ರೆಯೊಂದರಲ್ಲಿ ಸಾಮಾನ್ಯ ನಾಗರಿಕರಿಗೆ ಚಿಕಿತ್ಸೆ ನೀಡಿದ ಮೊದಲ ಆಸ್ಪತ್ರೆಯಿದು ಎಂದೂ ಮೆಚ್ಚುಗೆ ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT