ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಜೆಪಿಗೆ 25 ಸ್ಥಾನ: ಅರಗಿಸಿಕೊಳ್ಳದ ಎಚ್‌ಡಿಕೆ, ಸಿದ್ದರಾಮಯ್ಯ’

ಆ.15ರ ಮೊದಲು ರಾಜ್ಯ ಸಮ್ಮಿಶ್ರ ಸರ್ಕಾರ ಪತನ: ವಿಕ್ರಮಾರ್ಜುನ ತಿಂಗಳೆ
Last Updated 29 ಜೂನ್ 2019, 11:21 IST
ಅಕ್ಷರ ಗಾತ್ರ

ಕಾರವಾರ:‘ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯು ರಾಜ್ಯದಲ್ಲಿ 25 ಸ್ಥಾನಗಳನ್ನು ಗೆದ್ದಿರುವುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಮತ್ತುಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಅರಗಿಸಿಕೊಳ್ಳಲಾಗುತ್ತಿಲ್ಲ. ಕಂಸನಿಗೆ ಕೃಷ್ಣ ಕನಸಲ್ಲಿ ಬಂದಂತೆ ಪ್ರಧಾನಿ ನರೇಂದ್ರ ಮೋದಿಇಬ್ಬರ ಕನಸಲ್ಲೂ ಬರುತ್ತಿದ್ದಾರೆ’ ಎಂದು ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ವಿಕ್ರಮಾರ್ಜುನ ತಿಂಗಳೆ ಟೀಕಿಸಿದರು.

ನಗರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗ್ರಾಮ ವಾಸ್ತವ್ಯಕ್ಕೆ ತೆರಳಿದ್ದ ಸಂದರ್ಭದಲ್ಲಿ ಜನಸಾಮಾನ್ಯರು ಮನವಿ ಕೊಡಲು ಬಂದಾಗ ಮುಖ್ಯಮಂತ್ರಿ ಕುಮಾರಸ್ವಾಮಿ ಆಡಿದ ಮಾತು ಮಾನಸಿಕ ಸ್ಥಿಮಿತ ಕಳೆದುಕೊಂಡು ಹೇಳಿದ್ದಾಗಿದೆ. ಅತ್ತ ಸಿದ್ದರಾಮಯ್ಯ, ‘ನಾವುಇಷ್ಟೆಲ್ಲ ಕೆಲಸ ಮಾಡಿಯೂ ಮೋದಿಗೆ ಮತ ಹಾಕಿದ್ರಿ’ ಎಂದು ಮತದಾರರನ್ನು ಹಂಗಿಸಿದರು. ಯಾರಿಗೆ ಮತ ಕೊಡಬೇಕು ಎಂದು ಮತದಾರರು ನಿರ್ಧಾರ ಮಾಡಿದ್ದಾರೆ. ಪ್ರಜಾಪ್ರಭುತ್ವಕ್ಕೆಗೌರವ ಕೊಡಬೇಕು ಎಂಬ ಭಾವನೆ ಇಬ್ಬರಲ್ಲೂ ಇಲ್ಲದಿರುವುದು ದುರಂತ’ ಎಂದುಅಭಿಪ್ರಾಯಪಟ್ಟರು.

‘ಒಬ್ಬರು ಅಧಿಕಾರ ಕಳೆದುಕೊಳ್ಳುವ ಆತಂಕದಲ್ಲಿದ್ದರೆ, ಮತ್ತೊಬ್ಬರು ಮುಖ್ಯಮಂತ್ರಿ ಆಗಲಿಲ್ಲ ಎಂಬ ಚಡಪಡಿಕೆಯಲ್ಲಿದ್ದಾರೆ. ಹಾಗಾಗಿ ಅವರದೇ ಆದ ಕಾರಣಗಳಿಂದ ಆ.15ರ ವೇಳೆಗೆ ರಾಜ್ಯ ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ. ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಜಿಲ್ಲೆಯ ಅರಣ್ಯಅತಿಕ್ರಮಣಕಾರರ ಸಮಸ್ಯೆ ಬಗೆಹರಿಸುವ ಬಗ್ಗೆಎಚ್.ಡಿ.ಕುಮಾರಸ್ವಾಮಿ ಅವರು ಚುನಾವಣಾ ಪೂರ್ವದಲ್ಲಿ ಕೊಟ್ಟ ಮಾತು ಏನಾಯಿತು?ಮುಖ್ಯಮಂತ್ರಿಯಾದರೆ ಜಿಲ್ಲೆಗೆ ಬಂದು ಇಲ್ಲೇ ವಾಸ್ತವ್ಯ ಹೂಡಿ ಪರಿಹಾರ ಮಾಡುವುದಾಗಿ ತಿಳಿಸಿದ್ದರು. ಈ ಸಮಸ್ಯೆಯನ್ನು ಬಗೆಹರಿಸಿಲ್ಲ. ನಾವು ಅವರನ್ನು ವಚನಭ್ರಷ್ಟರು ಎಂದು ಮೊದಲಿನಿಂದ ಹೇಳುತ್ತಿದ್ದೇವೆ. ಆ ಮಾತನ್ನು ಅವರು ಉಳಿಸಿಕೊಂಡಿದ್ದಾರೆ’ ಎಂದು ವ್ಯಂಗ್ಯವಾಡಿದರು.

ಈ ಸಂದರ್ಭದಲ್ಲಿಶಾಸಕಿ ರೂಪಾಲಿ ನಾಯ್ಕ,ಪಕ್ಷದ ಜಿಲ್ಲಾ ಘಟಕದ ವಕ್ತಾರ ರಾಜೇಶ ನಾಯ್ಕ, ಮುಖಂಡರಾದ ನಾಗರಾಜ ನಾಯಕ, ಕಿರಣ್ ಕುಮಾರ್ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT