ಪ್ರಕೃತಿ ವಿಕೋಪ: ₹ 54 ಲಕ್ಷ ಪರಿಹಾರ ವಿತರಣೆ

7

ಪ್ರಕೃತಿ ವಿಕೋಪ: ₹ 54 ಲಕ್ಷ ಪರಿಹಾರ ವಿತರಣೆ

Published:
Updated:
ಎಸ್.ಎಸ್.ನಕುಲ್

ಕಾರವಾರ: ಜಿಲ್ಲೆಯ ವಿವಿಧೆಡೆ ಈ ವರ್ಷ ಪ್ರಕೃತಿ ವಿಕೋಪದಿಂದ ಹಾನಿಗೀಡಾದವರಿಗೆ ಈವರೆಗೆ ₹ 54.07 ಲಕ್ಷ ಪರಿಹಾರ ವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದರು.

ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಏಪ್ರಿಲ್ 1ರಿಂದ ಈವರೆಗೆ ಜಿಲ್ಲೆಯಲ್ಲಿ ಪ್ರಕೃತಿ ವಿಕೋಪದಿಂದಾಗಿ  ಮೂವರು ಮೃತಪಟ್ಟಿದ್ದಾರೆ. ಅವರ ಕುಟುಂಬಗಳಿಗೆ ತಲಾ ₹ 4 ಲಕ್ಷ ಪರಿಹಾರ ವಿತರಿಸಲಾಗಿದೆ. ಅಲ್ಲದೆ, ಜಿಲ್ಲೆಯಾದ್ಯಂತ ಒಟ್ಟು 25 ಜಾನುವಾರು ಮೃತಪಟ್ಟಿದ್ದು ಒಟ್ಟು ₹ 7.16 ಲಕ್ಷ ಸೇರಿ ಪರಿಹಾರ ನೀಡಲಾಗಿದೆ’ ಎಂದು ತಿಳಿಸಿದರು.

ಮಳೆಯಿಂದಾಗಿ ಜಿಲ್ಲೆಯಲ್ಲಿ 270 ಮನೆಗಳಿಗೆ ಹಾನಿಯಾಗಿದ್ದು, ₹ 56.23 ಲಕ್ಷ ಪರಿಹಾರ ವಿತರಿಸಲಾಗಿದೆ. 138 ಪ್ರಕರಣಗಳಿಗೆ ಪರಿಹಾರ ಮಂಜೂರಾಗಿದ್ದು ಅದರಲ್ಲಿ 109 ಪ್ರಕರಣಗಳನ್ನು ತಿರಸ್ಕರಿಸಲಾಗಿದೆ. 23 ಪ್ರಕರಣಗಳಿಗೆ ಸಂಬಂಧಿಸಿದಂತೆ ಶೀಘ್ರವೇ ಪರಿಹಾರ ವಿತರಣೆ ಮಾಡಲಾಗುವುದು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ 50.91 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 154 ಪ್ರಕರಣಗಳನ್ನು ಇತ್ಯರ್ಥಪಡಿಸಬೇಕಿದೆ. 61 ಪ್ರಕರಣಗಳಲ್ಲಿ ಪರಿಹಾರ ವಿತರಿಸಲಾಗಿದೆ. ಇತ್ಯರ್ಥವಾಗಬೇಕಿರುವ ಪ್ರಕರಣಗಳಲ್ಲಿ ಪರಿಹಾರ ವಿತರಣೆಗೆ ಈಗಾಗಲೇ ಎಲ್ಲ ತಹಶೀಲ್ದಾರ್‌ಗಳಿಗೆ ಪ್ರಕೃತಿ ವಿಕೋಪ ನಿಧಿಯಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !