ಶನಿವಾರ, ಡಿಸೆಂಬರ್ 7, 2019
25 °C
ಕಾಂಗ್ರೆಸ್ ಮುಖಂಡ ವಿನಯಕುಮಾರ್ ಸೊರಕೆ ಹೇಳಿಕೆ

ಅನರ್ಹರಿಗೆ ಮತ್ತೆ ಅರ್ಹತೆ ನೀಡಬೇಡಿ: ವಿನಯಕುಮಾರ ಸೊರಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಅನರ್ಹ ಶಾಸಕರಿಗೆ ವಿಧಾನಸಭೆ ಪ್ರವೇಶಿಸಲು ಯಲ್ಲಾಪುರ ಕ್ಷೇತ್ರದ ಮತದಾರರು ಮತ್ತೆ ಅರ್ಹತೆ ನೀಡಬಾರದು ಎಂದು ಕಾಂಗ್ರೆಸ್ ಮುಖಂಡ ವಿನಯಕುಮಾರ ಸೊರಕೆ ಹೇಳಿದರು. 

ತಾಲ್ಲೂಕಿನ ಭಾಶಿಯಲ್ಲಿ ಗುರುವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಈ ಕ್ಷೇತ್ರದ ಶಾಸಕರು ಮತದಾರರಿಗೆ ಮೋಸ ಮಾಡಿದ್ದಾರೆ. ಮತದಾರರು ಮತ್ತೊಮ್ಮೆ ಮೋಸ ಹೋಗದೇ, ಅನರ್ಹರಿಗೆ ತಕ್ಕ ಪಾಠ ಕಲಿಸಬೇಕು. ಅನರ್ಹರಾದವರು ಯಾವ ನೈತಿಕತೆಯ ಮೇಲೆ ಮತ್ತೆ ಮತ ಕೇಳುತ್ತಾರೆ. ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕ ಜನಪರವಾಗಿದ್ದಾರೆ. ಕ್ಷೇತ್ರದ ಮತದಾರರು ಕಾಂಗ್ರೆಸ್‌ ಕಡೆಗೆ ಒಲವು ಹೊಂದಿದ್ದಾರೆ ಎಂದರು.

ಬನವಾಸಿ ಹೋಬಳಿಯಲ್ಲಿ ಬೆಳಗಿನಿಂದ ಪ್ರಚಾರ ಆರಂಭಿಸಿದ ಸೊರಕೆ, ಸಹಸ್ರಳ್ಳಿ, ಮೊಗವಳ್ಳಿ, ಕಲಕೊಪ್ಪ, ನರೂರು, ಎಡಗೊಪ್ಪ, ಬನವಾಸಿಯಲ್ಲಿ ಗ್ರಾಮಸ್ಥರ ಜೊತೆ ಚರ್ಚಿಸಿದರು. ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚಿಸಿದರು. ಕಾಂಗ್ರೆಸ್ ಮುಖಂಡ ಪಿ.ಸಿ.ಮೋಹನ, ಬನವಾಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿ.ಎಫ್.ನಾಯ್ಕ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷೆ ಶ್ರೀಲತಾ ಕಾಳೇರಮನೆ, ಜಿಲ್ಲಾ ಪಂಚಾಯ್ತಿ ಸದಸ್ಯ ಬಸವರಾಜ ದೊಡ್ಮನಿ, ಪ್ರಮುಖರಾದ ಎಸ್.ಟಿ.ಹೆಗಡೆ, ಕಿರಣ ನಾಯ್ಕ ಇದ್ದರು.

ಪ್ರತಿಕ್ರಿಯಿಸಿ (+)