ಶುಕ್ರವಾರ, ಏಪ್ರಿಲ್ 23, 2021
31 °C
ಕಾಂಗ್ರೆಸ್‌ ಜಿಲ್ಲಾ ಘಟಕದಿಂದ ಡಿವೈಎಸ್ಪಿ ಭೇಟಿ

ಶಿರಸಿ ‌| ಶಾಸಕರನ್ನು ಹುಡುಕಿಕೊಡಲು ಪೊಲೀಸರಿಗೆ ದೂರು !

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿರಸಿ: ಯಲ್ಲಾಪುರ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈನಲ್ಲಿ ಅತೃಪ್ತರೊಂದಿಗೆ ಇದ್ದಾರೆ. ಇತ್ತ ಇಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಮುಖರು ಬುಧವಾರ ಇಲ್ಲಿನ ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿ, ಶಾಸಕರನ್ನು ಹುಡುಕಿಕೊಡುವಂತೆ ದೂರ ದಾಖಲಿಸಿದ್ದಾರೆ.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ನೇತೃತ್ವದಲ್ಲಿ, ಕಾರ್ಯಕರ್ತರು ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ ಅವರಿಗೆ ದೂರು ನೀಡಿದರು. ಹತ್ತು ದಿನಗಳಿಂದ ಶಾಸಕರು ಕಾಣೆಯಾಗಿದ್ದು, ಶಾಸಕರು ಸಂಪರ್ಕಕ್ಕೂ ಸಿಕ್ಕಿಲ್ಲ. ಕ್ಷೇತ್ರದ ಜನರು ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾಗಿದ್ದಾರೆ. ಶಾಸಕರನ್ನು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಹರಣ ಮಾಡಿ, ಅಕ್ರಮ ಹಾಗೂ ಬಲವಂತವಾಗಿ ಕೂಡಿ ಹಾಕಿರಬಹುದೆಂಬ ಸಂಶಯ ಬಲವಾಗಿದೆ. ಶಾಸಕರ ಉಪಸ್ಥಿತಿ ಕ್ಷೇತ್ರಕ್ಕೆ ತೀರಾ ಅಗತ್ಯವಾಗಿರುವ ಕಾರಣ, ದೂರು ಸ್ವೀಕರಿಸಿದ ತಕ್ಷಣವೇ ಕಾರ್ಯಪ್ರವೃತ್ತರಾಗಿ ಶಿವರಾಮ ಹೆಬ್ಬಾರರನ್ನು ಹುಡುಕಿಕೊಡಬೇಕು ಎಂದು ಮನವಿ ಮಾಡಿದ್ದಾರೆ.

 ಭೀಮಣ್ಣ ನಾಯ್ಕ ಮಾತನಾಡಿ, ‘ರೈತರು, ಸಾರ್ವಜನಿಕರು ಸೇರಿದಂತೆ ಅನೇಕರು ಶಾಸಕರ ಕುರಿತಾಗಿ ಕೇಳಿಕೊಂಡು ಬರುತ್ತಿದ್ದಾರೆ. ಕಳೆದ ನಾಲ್ಕು ದಿನಗಳ ಮೊದಲು ಶಾಸಕರ ಮನೆಗೆ ತೆರಳಿದಾಗ ಅವರು ಇಲ್ಲದ ಕಾರಣ ಅವರನ್ನು ಹುಡುಕಿಕೊಡುವಂತೆ ಮನವಿ ಮಾಡಿದ್ದೇವೆ’ ಎಂದರು.

ಜಿಲ್ಲಾ ಪಂಚಾಯ್ತಿ ಸದಸ್ಯ ಜಿ.ಎನ್.ಹೆಗಡೆ ಮುರೇಗಾರ, ಪ್ರಮುಖರಾದ ಎಸ್‌.ಕೆ.ಭಾಗವತ, ರಮೇಶ ದುಬಾಶಿ, ದೀಪಕ ದೊಡ್ಡೂರು, ಎಂ.ಎನ್.ನಾಯ್ಕ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು