ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿರಸಿ: ಸಂಸದರ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಕ್ರಮಕ್ಕೆ ಆಗ್ರಹ
Last Updated 4 ಫೆಬ್ರುವರಿ 2020, 13:19 IST
ಅಕ್ಷರ ಗಾತ್ರ

ಶಿರಸಿ: ಮಹಾತ್ಮ ಗಾಂಧೀಜಿ ಕುರಿತು ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆ ಹಗುರವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ, ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಇಲ್ಲಿ ಪ್ರತಿಭಟನೆ ನಡೆಯಿತು.

ಬಿಡಕಿಬೈಲಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಕಾರ್ಯಕರ್ತರು, ಪ್ರತಿಮೆಯೆದರು ಧರಣಿ ಕುಳಿತರು. ‘ದೇಶಕ್ಕೆ ಸ್ವಾತಂತ್ರ್ಯ ತಂದುಕೊಡುವಲ್ಲಿ ಮಹಾತ್ಮ ಗಾಂಧೀಜಿ ಪ್ರಮುಖ ಪಾತ್ರ ವಹಿಸಿದ್ದರು. ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಮನಬಂದಂತೆ ಮಾತನಾಡಿರುವ ಅನಂತಕುಮಾರ ವಿರುದ್ಧ ಕ್ರಮ ಕೈಗೊಳ್ಳಬೇಕು. ಪ್ರತಿ ಬಾರಿ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರು ಸಂಸದರಾಗಲು ಯೋಗ್ಯರಲ್ಲ. ಸಂಸತ್ ಸದಸ್ಯ ಸ್ಥಾನಕ್ಕೆ ಮಸಿ ಬಳಿಯುತ್ತಿರುವ ಇಂತಹವರ ವಿರುದ್ಧ ಕ್ರಮವಾಗಬೇಕು’ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಆಗ್ರಹಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಗೌಡ, ಬನವಾಸಿ ಬ್ಲಾಕ್ ಅಧ್ಯಕ್ಷ ಸಿ.ಎಫ್.ನಾಯ್ಕ, ಪ್ರಮುಖರಾದ ಅಬ್ಬಾಸ್ ತೋನ್ಸೆ, ಎಚ್.ಯು.ಪಠಾಣ, ಎಸ್.ಕೆ.ಭಾಗವತ, ಖಾದರ್ ಆನವಟ್ಟಿ, ರಾಜು ಉಗ್ರಾಣಕರ, ದೀಪಕ ದೊಡ್ಡೂರು, ವಿಕ್ಟರ್ ಡಯಾಸ್, ಗಾಯತ್ರಿ ನೆತ್ರೇಕರ, ಮೋಹಿನಿ ಬೈಲೂರು, ಗೀತಾ ಭೋವಿ, ಸತೀಶ ನಾಯ್ಕ, ಶೈಲೇಶ್ ಜೋಗಳೇಕರ, ಪ್ರಸನ್ನ ಶೆಟ್ಟಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT