ಶಿರಸಿ: ಸ್ವಾತಂತ್ರ್ಯೋತ್ಸವದ 75ನೇ ವರ್ಷಾಚರಣೆ ಅಂಗವಾಗಿ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು. ನಂತರ ಪಕ್ಷದ ಕಚೇರಿಯ ಆವರಣದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಲಾಯಿತು.

ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಬಿಡ್ಕಿಬೈಲಿನಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಬಳಿಕ ಸುಮಾರು ನಾಲ್ಕು ಕಿ.ಮೀ.ನಷ್ಟು ದೂರದವರೆಗೆ ಪಾದಯಾತ್ರೆ ನಡೆಸಿ ಪಕ್ಷದ ಕಚೇರಿಗೆ ತೆರಳಿದರು. ಪಾದಯಾತ್ರೆ ಇದ್ದಕ್ಕೂ ದೇಶಭಕ್ತಿಯ ಘೋಷಣೆ ಮೊಳಗಿಸಲಾಯಿತು.

ಆರೋಗ್ಯ ಸಹಾಯಹಸ್ತ ಯೋಜನೆ ಅಡಿ ಗ್ರಾಮೀಣ ಭಾಗದ ಜನರಿಗೆ ಆರೋಗ್ಯ ಸೇವೆ ಒದಗಿಸಲು ನೆರವಾದ ಸ್ಕೋಡ್ವೇಸ್ ಸಂಸ್ಥೆಯ ಸಿಬ್ಬಂದಿಯನ್ನು ಭೀಮಣ್ಣ ನಾಯ್ಕ ಸನ್ಮಾನಿಸಿದರು. ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.