ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಏರಿಕೆ ವಿರುದ್ಧ ಮಹಿಳಾ ಕಾಂಗ್ರೆಸ್ ಪ್ರತಿಭಟನೆ

Last Updated 8 ಸೆಪ್ಟೆಂಬರ್ 2021, 15:26 IST
ಅಕ್ಷರ ಗಾತ್ರ

ಶಿರಸಿ: ಅಡುಗೆ ಅನಿಲ, ತೈಲ ಉತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಖಾಲಿಯಾದ ಅಡುಗೆ ಸಿಲಿಂಡರ್ ಇಟ್ಟು ಮಹಿಳಾ ಕಾಂಗ್ರೆಸ್ ತಾಲ್ಲೂಕು ಘಟಕದವರು ಬುಧವಾರ ಇಲ್ಲಿನ ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ, ಗ್ರೇಡ್–2 ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು.

ಕೋವಿಡ್‍ನಿಂದ ಜನಸಾಮಾನ್ಯರು ತತ್ತರಿಸಿದ್ದು ಜೀವನ ನಿರ್ವಹಣೆ ಕಷ್ಟವಾಗಿರುವ ನಡುವೆ ಬೆಲೆ ಏರಿಕೆ ಮಾಡಿ ಕೇಂದ್ರ ಸರ್ಕಾರ ಗಾಯದ ಮೇಲೆ ಬರೆ ಎಳೆಯುವ ಕೆಲಸ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ಘೋಷಣೆ ಕೂಗಲಾಯಿತು.

‘ಬೆಲೆ ಏರಿಕೆಯ ಪರಿಣಾಮ ಬಡ ಮತ್ತು ಮಧ್ಯಮ ವರ್ಗದ ಜನರ ಖರೀದಿ ಸಾಮರ್ಥ್ಯ ಕುಗ್ಗುತ್ತಿದೆ. ಸರ್ಕಾರ ಬೆಲೆ ನಿಯಂತ್ರಿಸಲು ವಿಫಲವಾಗುತ್ತಿದೆ. ಕೆಲವೇ ಬಂಡವಾಳಶಾಹಿಗಳ ಪರವಾಗಿ ಇರುವಂತೆ ವರ್ತಿಸಲಾಗುತ್ತಿದೆ’ ಎಂದು ಆರೋಪಿಸಿದರು.

‘ಕೇಂದ್ರದಲ್ಲಿ ರಾಷ್ಟ್ರಪತಿ ಮತ್ತು ರಾಜ್ಯದಲ್ಲಿ ರಾಜ್ಯಪಾಲರು ಕೂಡಲೆ ಮಧ್ಯಪ್ರವೇಶಿಸಿ ಬೆಲೆ ಏರಿಕೆ ನಿಯಂತ್ರಿಸಲು ಸರ್ಕಾರಕ್ಕೆ ಸೂಚಿಸಬೇಕು’ ಎಂದು ಒತ್ತಾಯಿಸಿದರು.

ಮಹಿಳ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಜ್ಯೋತಿ ಪಾಟೀಲ್, ತಾಲ್ಲೂಕು ಘಟಕದ ಅಧ್ಯಕ್ಷೆ ಗೀತಾ ಶೆಟ್ಟಿ, ರುಬೇಕಾ ಫರ್ನಾಂಡಿಸ್, ಕಾಂಗ್ರೆಸ್ ಪ್ರಮುಖರಾದ ಎಸ್.ಕೆ.ಭಾಗವತ, ದೀಪಕ ದೊಡ್ಡೂರು, ಗಣೇಶ ದಾವಣಗೆರೆ, ಶ್ರೀಪಾದ ಹೆಗಡೆ ಕಡವೆ, ಶ್ರೀನಿವಾಸ ನಾಯ್ಕ, ಶ್ರೀಧರ ನಾಯ್ಕ, ಪ್ರವೀಣ ಹೆಗಡೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT