ಗುರುವಾರ , ಜನವರಿ 21, 2021
27 °C

ಅಧಿಕಾರಿಗಳ ಭರವಸೆ ಪ್ರತಿಭಟನೆ ಅಂತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾಂಡೇಲಿ: ದಾಂಡೇಲಿ ವಿಭಾಗದ ಕಾಳಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುವ ನೌಕರರಿಗೆ ಕಳೆದ 5-6 ತಿಂಗಳಿನಿಂದ ವೇತನ ಪಾವತಿಸದಿರುವುದನ್ನು ಖಂಡಿಸಿ ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ನೌಕರರ ಸಂಘದ ವತಿಯಿಂದ ಶುಕ್ರವಾರ ನಗರದ ವನ್ಯಜೀವಿ ವಿಭಾಗದ ಕಚೇರಿಯ ಮುಂದೆ ಪ್ರತಿಭಟನೆ ನಡೆಯಿತು.

ರಾಜ್ಯ ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣಾ ನೌಕರರ ಸಂಘದ ಅಧ್ಯಕ್ಷ ಹರೀಶ ನಾಯ್ಕ ಮಾತನಾಡಿ, ಸರ್ಕಾರ ವೇತನ ಬಿಡುಗಡೆಗೆ ವಿಳಂಬ ನೀತಿ ಅನುಸರಿಸುತ್ತಿದೆ ಎಂದರು.

ಎಸಿಎಫ್ ಕೆ.ಸಿ ಗೊರವರ ಸರ್ಕಾರದಿಂದ ವೇತನ ಬಿಡುಗಡೆಯ ಆದೇಶ ಹೊರಡಿಸಲಾಗಿದ್ದು, ಕೆಲವೇ ದಿನಗಳಲ್ಲಿ ಬಾಕಿ ಇರುವ ವೇತನವನ್ನು ಬಿಡುಗಡೆ ಮಾಡಲಾಗುವುದು ಎಂದರು. ಡಿ.ವೈಎಸ್.ಪಿ ಶಿವಾನಂದ ಚಲವಾದಿ. ಸಿ.ಪಿ.ಐ ಪ್ರಭು, ಗಂಗನಹಳ್ಳಿ ಪ್ರತಿಭಟನಾಕಾರರ ಮನವೊಲಿಸಿದ ನಂತರ ಪ್ರತಿಭಟನೆಯನ್ನು ಹಿಂದಕ್ಕೆ ಪಡೆದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.