ಶನಿವಾರ, ಸೆಪ್ಟೆಂಬರ್ 18, 2021
28 °C
ಗುತ್ತಿಗೆದಾರರ ವಿರುದ್ಧ ಅಸಮಾಧಾನ                

ಅಂಕೋಲಾ ಹೈಟೆಕ್ ಬಸ್ ನಿಲ್ದಾಣ: ‘ಕಾಮಗಾರಿ ಇನ್ನೂ ವಿಳಂಬವಾದರೆ ಕ್ರಮ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಂಕೋಲಾ: ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿದೆ. ಇದನ್ನು ಶುಕ್ರವಾರ ಪರಿಶೀಲಿಸಿದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ದಿವಾಕರ ಯರಗುಪ್ಪ, ಗುತ್ತಿಗೆದಾರರನ್ನು ತರಾಟೆಗೆ ತೆಗೆದುಕೊಂಡರು.

₹ 3.85 ಕೋಟಿ ವೆಚ್ಚದಲ್ಲಿ ನಡೆಯುತ್ತಿರುವ ಬಸ್ ನಿಲ್ದಾಣದ ಕಾಮಗಾರಿ ಆರಂಭವಾಗಿ ಒಂದು ವರ್ಷ ಕಳೆಯಿತು. ಆದರೆ, ಅರ್ಧದಷ್ಟೂ ಕಾಮಗಾರಿಯಾಗಿಲ್ಲ. ಈ ಬಗ್ಗೆ ಸಾರ್ವಜನಿಕರು ಹಲವು ಬಾರಿ ಸಂಸ್ಥೆಯ ಹಿರಿಯ ಅಧಿಕಾರಿಗಳಿಗೆ ದೂರಿದ್ದರು. 

ಕಾಮಗಾರಿಯನ್ನು ಪರಿಶೀಲಿಸಿದ ದಿವಾಕರ ಯರಗುಪ್ಪ ಮತ್ತು ಸಂಸ್ಥೆಯ ಎಂಜಿನಿಯರ್ ಕೆ.ಬಿ.ಕುಲಕರ್ಣಿ, ಸ್ಥಳದಲ್ಲಿದ್ದ ಗುತ್ತಿಗೆದಾರರಿಂದ ಮಾಹಿತಿ ಪಡೆದರು. ಗುತ್ತಿಗೆದಾರರ ಕಾರ್ಯವೈಖರಿಗೆ ಅಸಮಾಧಾನ ವ್ಯಕ್ತಪಡಿಸಿ, ‘ಕೆಲಸ ಮಾಡುವುದಾದರೆ ನಿಷ್ಠೆಯಿಂದ ಮಾಡಿ. ಇಲ್ಲದಿದ್ದರೆ ನಿರ್ದಾಕ್ಷಿಣ್ಯವಾಗಿ ನಿಮ್ಮ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು’ ಎಚ್ಚರಿಕೆ ನೀಡಿದರು.

ಇದೇವೇಳೆ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಒಂದು ತಿಂಗಳಿನಲ್ಲಿ ಮಳೆಗಾಲ ಆರಂಭವಾಗುತ್ತದೆ. ಜೂನ್ ಅಂತ್ಯದೊಳಗೆ ಎಲ್ಲಾ ಕಾಮಗಾರಿ ಪೂರ್ಣಗೊಳ್ಳಬೇಕಿದೆ. ಮಳೆಗಾಲದಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆ ಆಗದ ರೀತಿಯಲ್ಲಿ ಕಾಮಗಾರಿ ಕೈಗೊಳ್ಳಲು ಸೂಚಿಸಲಾಗಿದೆ. ಗುತ್ತಿಗೆದಾರರು ಇನ್ನೂ ನಿಧಾನಗತಿ ಅನುಸರಿಸಿದರೆ ಸೂಕ್ತ ಕ್ರಮ ಜರಗಿಸುತ್ತೇವೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.