ಕಾರವಾರ: ‘ಕೊರೊನಾ 2 ವೈರಸ್ ಹರಡುತ್ತಿರುವ ಬಗ್ಗೆ ಆತಂಕ ಪಡುವ ಅವಶ್ಯಕತೆ ಇಲ್ಲ. ಬದಲಾಗಿ ಮುಂಜಾಗೃತಾ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕು’ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ಸಲಹೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.

‘ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಂಕಿ– ಅಂಶಗಳನ್ನು ಬಿತ್ತರಿಸುತ್ತಿರುವುದು ಜನರನ್ನು ಹೆದರಿಸುವ ಕಾರಣಕ್ಕಲ್ಲ. ಬದಲಾಗಿ ಎಚ್ಚೆತ್ತುಕೊಂಡು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು ವೈರಸ್ ಹರಡದಂತೆತಡೆಯುವ ಸಲುವಾಗಿ’ ಎಂದು ಹೇಳಿದರು.

ಹೆಚ್ಚಿನ ಜನರು ಸೇರುವ ಸಭೆ ಸಮಾರಂಭಗಳಲ್ಲಿ ಅನವಶ್ಯಕವಾಗಿ ಭಾಗವಹಿಸದೇ ಕೆಲವು ದಿನಗಳ ಕಾಲ ಆದಷ್ಟೂ ಜಾಗೃತರಾಗಿರುವುದು ಉತ್ತಮ ಎಂದು ಸೂಚಿಸಿದರು.

ಜಿಲ್ಲಾಧಿಕಾರಿ ಡಾ.ಕೆ.ಹರೀಶ ಕುಮಾರಮಾತನಾಡಿ, ‘ಮುಂಜಾಗೃತಾ ಕ್ರಮವಾಗಿ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದೂಡಲಾಗಿದೆ.ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಶಿಘ್ರದಲ್ಲಿಯೇ ಅವೂಮುಕ್ತಾಯಗೊಳ್ಳಲಿವೆ. ಪ್ರತಿಯೊಬ್ಬರು ಆರೋಗ್ಯದ ಹಿತದೃಷ್ಟಿಯಿಂದ14 ದಿನಗಳ ಕಾಲ ವೈಯಕ್ತಿಕ ಕಡಿವಾಣ ಹಾಕಿಕೊಳ್ಳುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ಕುಡಿಯುವ ನೀರು, ಶಿಕ್ಷಣ, ನೆರೆ ಹಾನಿ ಮತ್ತು ಬರ ಪರಿಹಾರ, ಸಪ್ತಪದಿ ಸಾಮೂಹಿಕ ವಿವಾಹ, ಮರಳು ಗಣಿಗಾರಿಕೆ ಸೇರಿದಂತೆವಿವಿಧ ವಿಷಯಗಳ ಬಗ್ಗೆ ಉಸ್ತುವಾರಿ ಕಾರ್ಯದರ್ಶಿ ಮುನೀಶ್ ಮೌದ್ಗೀಲ್ಮಾಹಿತಿಪಡೆದುಕೊಂಡರು.

ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಅಧಿಕಾರಿಮೊಹಮ್ಮದ್ರೋಶನ್,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಜಿ.ಎನ್.ಅಶೋಶ ಕುಮಾರ್, ಕಾರವಾರ ಉಪ ವಿಭಾಗಾಧಿಕಾರಿ ಎಂ.ಪ್ರಿಯಾಂಗಾ, ಡಾ.ವಿನೋದ್ ಭೂತೆಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.