ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರವಾರ | ಬಾಲಕಿಯ ತಂದೆಗೂ ಕೋವಿಡ್ ದೃಢ

Last Updated 20 ಮೇ 2020, 13:46 IST
ಅಕ್ಷರ ಗಾತ್ರ

ಕಾರವಾರ: ಯಲ್ಲಾಪುರದ ಕ್ವಾರಂಟೈನ್ ಕೇಂದ್ರದಲ್ಲಿದ್ದ ಬಾಲಕಿಯ (ರೋಗಿ ಸಂಖ್ಯೆ1314) ತಂದೆಗೂ ಕೋವಿಡ್ 19 ಬುಧವಾರ ದೃಢಪಟ್ಟಿದೆ. ಅವರು ತಮ್ಮ ಕುಟುಂಬದ ಜೊತೆ ಮಹಾರಾಷ್ಟ್ರದ ಸೊಲ್ಲಾಪುರದಿಂದ ಬಂದಿದ್ದರು.

ಇದರೊಂದಿಗೆ ಜಿಲ್ಲೆಯಲ್ಲಿ ಕೋವಿಡ್ 19 ಸಕ್ರಿಯ ಪ್ರಕರಣಗಳ ಸಂಖ್ಯೆ 44ಕ್ಕೇರಿದೆ. ಒಟ್ಟು 56ಜನರಿಗೆ ಸೋಂಕು ದೃಢಪಟ್ಟಿದ್ದು, 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಪ್ರಕರಣ ದಾಖಲು:ಮೊದಲ ಹಂತದ ಲಾಕ್‌ಡೌನ್ ಘೋಷಣೆಯಾದ ದಿನದಿಂದ ಬುಧವಾರದ ತನಕ ನಿಯಮ ಉಲ್ಲಂಘಿಸಿದವರ ವಿರುದ್ಧ ಪೊಲೀಸರು 128 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ. 8,705 ವಾಹನ ಕಾಯ್ದೆ ಉಲ್ಲಂಘನೆ ಪ್ರಕರಣಗಳು ನಮೂದಾಗಿವೆ. ಒಟ್ಟ ₹ 30.06 ಲಕ್ಷ ದಂಡ ವಸೂಲಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ತಿಳಿಸಿದ್ದಾರೆ.

ಲಾಕ್‌ಡೌನ್ ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಅಲ್ಲದೇ ಡ್ರೋಣ್ ಕ್ಯಾಮೆರಾಗಳ ಮೂಲಕವೂ ನಿಗಾ ಇಡಲಾಗುತ್ತಿದೆ. ವದಂತ ಮತ್ತು ಸುಳ್ಳು ಸುದ್ದಿಗಳನ್ನು ಹರಡುವ ಸಾಮಾಜಿಕ ಜಾಲತಾಣಗಳ ವಿರುದ್ಧವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT