ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ತೊಬ್ಬರಿಗೆ ಕೋವಿಡ್ 19 ದೃಢ

Last Updated 25 ಮೇ 2020, 12:32 IST
ಅಕ್ಷರ ಗಾತ್ರ

ಕಾರವಾರ: ಹೊನ್ನಾವರಕ್ಕೆ ಮಹಾರಾಷ್ಟ್ರದಿಂದ ವಾಪಸಾಗಿರುವ 50 ವರ್ಷದ ಪುರುಷನಲ್ಲಿ (ರೋಗಿ ಸಂಖ್ಯೆ 2176) ಕೋವಿಡ್ 18ಸೋಂಕು ದೃಢಪಟ್ಟಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 36ಕ್ಕೇರಿದೆ.

ಜಿಲ್ಲೆಯಲ್ಲಿ ಈಗಾಗಲೇ 69 ಮಂದಿಗೆ ಸೋಂಕು ತಗುಲಿದ್ದು, 33 ಮಂದಿ ಗುಣಮುಖರಾಗಿದ್ದಾರೆ.ಕೋವಿಡ್ 19 ಸೋಂಕಿತ 18 ವರ್ಷದ ಯುವತಿಯೂ(ರೋಗಿ ಸಂಖ್ಯೆ 659) ಸೋಂಕುಮುಕ್ತರಾಗಿದ್ದು, ಭಾನುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರನ್ನು ಭಟ್ಕಳದ ಸಾಂಸ್ಥಿಕ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗಿದೆ. ಉಳಿದ ಕೆಲವು ಸೋಂಕಿತರೂ ಸಂಪೂರ್ಣ ಚೇತರಿಸಿಕೊಂಡಿದ್ದು, ಮಂಗಳವಾರ ಬಿಡುಗಡೆಯಾಗುವ ಸಾಧ್ಯತೆಯಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT