ಸೋಮವಾರ, ಜೂನ್ 1, 2020
27 °C
ಕಾರವಾರದ ವೈದ್ಯಕೀಯ ಕಾಲೇಜಿನಲ್ಲಿ ₹ 1 ಕೋಟಿ ವೆಚ್ಚದಲ್ಲಿ ಸ್ಥಾಪನೆ: ಜಿಲ್ಲಾಧಿಕಾರಿ ಹರೀಶಕುಮಾರ್

ಒಂದು ವಾರದಲ್ಲಿ ಕೋವಿಡ್ 19 ಘಟಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕು ಹರಡದಂತೆ ತಡೆಯಲು ಜಿಲ್ಲಾಡಳಿತವು ವ್ಯಾಪಕ ಕ್ರಮಗಳನ್ನು ಕೈಗೊಳ್ಳುತ್ತಿದೆ. ಆದ್ದರಿಂದ ಜನರು ಭಯಪಡಬೇಕಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಿಳಿಸಿದ್ದಾರೆ.

ಭಟ್ಕಳದಲ್ಲಿ ಹೇರಲಾಗಿರುವ ಆರೋಗ್ಯ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾಡಳಿತವು ಸಮರ್ಥವಾಗಿದೆ. ಇದರ ಭಾಗವಾಗಿ ಏ.3ರ ಮೊದಲು ಕಾರವಾರದ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ (ಕಿಮ್ಸ್) ಕೋವಿಡ್ 19 ಚಿಕಿತ್ಸಾ ಘಟಕವು ಸಿದ್ಧವಾಗಲಿದೆ. ಇದಕ್ಕಾಗಿ ₹ 1 ಕೋಟಿ ರೂಪಾಯಿ ವ್ಯಯಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಘಟಕದಲ್ಲಿ ಏನೇನಿರಲಿವೆ?: ‘150 ಹಾಸಿಗೆಗಳು ಇರುವ ಈ ಘಟಕದಲ್ಲಿ ಆಮ್ಲಜನಕ ಪೂರೈಕೆಯೊಂದಿಗೆ ಪ್ರತ್ಯೇಕತಾ ಕೇಂದ್ರ (ಐಸೊಲೇಷನ್ ಸೆಂಟರ್) ವ್ಯವಸ್ಥೆ ಮಾಡಲಾಗಿದೆ. ಕ್ವಾರೆಂಟೈನ್‌ಗಾಗಿ 50 ಹಾಸಿಗೆ ಹಾಗೂ ಸಂಪರ್ಕ ತಡೆಗೆ 25 ಹಾಸಿಗೆ ಹೊಂದಿದೆ. ಆಸ್ಪತ್ರೆಯಿಂದ ಹೊರಗೆ 10 ಹಾಸಿಗೆಗಳ ಪ್ರತ್ಯೇಕ ತೀವ್ರ ನಿಗಾ ಘಟಕ ಇರುತ್ತದೆ. ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಮೊಹಮ್ಮದ್ ರೋಶನ್ ಈ ಎಲ್ಲ ಚಟುವಟಿಕೆಗಳ ಮೇಲೆ ಸಂಪೂರ್ಣ ನಿಗಾ ಇಡಲಿದ್ದಾರೆ’ ಎಂದು ಹೇಳಿದ್ದಾರೆ.

‘ಸಾರ್ವಜನಿಕರು ಮನೆಗಳಲ್ಲೇ ಇದ್ದುಕೊಂಡು ವಿಶ್ರಾಂತಿ ಪಡೆಯಿರಿ. ಕುಟುಂಬ ಸದಸ್ಯರೊಂದಿಗೆ ನಿಮ್ಮ ವಿರಾಮವನ್ನು ಆನಂದಿಸಿ. ವದಂತಿ ಹರಡಲು ಯಾವುದೇ ಅವಕಾಶವನ್ನು ನೀಡಬೇಡಿ. ಇದು ಕೋವಿಡ್ 19ನಂತೆಯೇ ಅಪಾಯಕಾರಿ’ ಎಂದು ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.

ಉಸ್ತುವಾರಿ ಸಚಿವರ ಸಭೆ ಇಂದು: ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಮಾರ್ಚ್ 29ರಂದು ಕಾರವಾರಕ್ಕೆ ಭೇಟಿ ನೀಡಲಿದ್ದಾರೆ. 

ಜಿಲ್ಲೆಯಲ್ಲಿ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಜೊತೆ ಪರಿಶೀಲನಾ ಸಭೆ ಹಮ್ಮಿಕೊಳ್ಳಲಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಧ್ಯಾಹ್ನ ಒಂದು ಗಂಟೆಗೆ ಸಭೆ ಆಯೋಜಿಸಲಾಗಿದೆ.

ಜಿಲ್ಲಾಡಳಿತದಿಂದ ಆಹಾರದ ವ್ಯವಸ್ಥೆ: ಜಿಲ್ಲೆಯಲ್ಲಿ ಅಗತ್ಯ ತುರ್ತು ಆಹಾರದ ಅಗತ್ಯ ಇರುವವರಿಗೆ ಅಂಗನವಾಡಿಗಳಲ್ಲಿ ಆಹಾರ ಸಿದ್ಧಪಡಿಸಿ ವಿತರಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ನಿರ್ಗತಿಕರಿಗೆ, ಆಶ್ರಯವಿಲ್ಲದೇ ತೊಂದರೆಯಲ್ಲಿ ಇರುವವರಿಗೆ ಆಹಾರ ಮತ್ತು ಉಳಿದುಕೊಳ್ಳುವ ತಾತ್ಕಾಲಿಕ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಸಹಾಯದ ಅಗತ್ಯವಿರುವ ಸಾರ್ವಜನಿಕರು ತಮ್ಮ ಹೆಸರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಡಾ.ರಾಜೇಂದ್ರ ಬೇಕಲ್ (ಮೊಬೈಲ್: 98803 01250) ಅವರನ್ನು ಸಂಪರ್ಕಿಸಬಹುದು.

ಹಿಂದುಳಿದ ವರ್ಗಗಳ ಇಲಾಖೆಯ ವಸತಿ ನಿಲಯಗಳಲ್ಲಿ ಆಶ್ರಯ ಮತ್ತು ಆಹಾರದ ವ್ಯವಸ್ಥೆ ಮಾಡಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಪುರುಷೋತ್ತಮ (ಮೊಬೈಲ್: 94838 86886) ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿ ಇಲಾಖೆಯ ಬಡಿಗೇರ್ (ಮೊಬೈಲ್: 94485 08383) ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು