ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಂಡೇಲಿ ನಗರದಲ್ಲಿ ಕಾಣಿಸಿಕೊಂಡ ಮೊಸಳೆ: ಜನರಲ್ಲಿ ಆತಂಕ

Last Updated 10 ಮಾರ್ಚ್ 2022, 6:00 IST
ಅಕ್ಷರ ಗಾತ್ರ

ದಾಂಡೇಲಿ: ಹಳೆ ದಾಂಡೇಲಿಯ ಬಸ್ ಡಿಪೊ ಸಮೀಪದ ಜನ ವಸತಿ ಪ್ರದೇಶದಲ್ಲಿ ಗುರುವಾರ ಬೆಳ್ಳಂಬೆಳಿಗ್ಗೆ ಸುಮಾರು ಆರು ಅಡಿ ಉದ್ದದ ಮೊಸಳೆ ಕಾಣಿಸಿಕೊಂಡು ಕೆಲಕಾಲ ಆತಂಕಕ್ಕೆ ಕಾರಣವಾಯಿತು.

ಹಳೇ ದಾಂಡೇಲಿ ವಾರ್ಡ್ 5ರ ವ್ಯಾಪ್ತಿಯಲ್ಲಿ ನದಿ ತೀರದ ಅನತಿ ದೂರದಲ್ಲಿ ಮೊಸಳೆ ರಸ್ತೆಯಲ್ಲಿ ಕಾಣಿಸಿಕೊಂಡು ಜನರನ್ನು ಭೀತಿಗೊಳಿಸಿತ್ತು. ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟು ಮೊಸಳೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾದರು.

ವಾರ್ಡ್ ವ್ಯಾಪ್ತಿಯಲ್ಲಿ ಮೊಸಳೆ ಬಂದು ಸ್ಥಳೀಯರಲ್ಲಿ ಆತಂಕ ಉಂಟುಮಾಡಿದ್ದು, ಸ್ಥಳಕ್ಕೆ ಬರುವಂತೆ ನಗರಸಭೆ ಸದಸ್ಯರಿಗೆ ದೂರವಾಣಿ ಕರೆ ಮಾಡಿದರು. ಆದರೆ, ಅವರು ಕರೆ ಸ್ವೀಕರಿಸಲಿಲ್ಲ, ಸ್ಥಳಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಮೊಸಳೆ ಸ್ಥಳಾಂತರಕ್ಕೆ ಪಟ್ಟು;ಪಟೇಲ್ ನಗರದ ವ್ಯಾಪ್ತಿಯಲ್ಲಿ ಕಳೆದ ತಿಂಗಳು ಯುವಕನ ಮೇಲೆ ಮೊಸಳೆ ದಾಳಿ ಮಾಡಿತ್ತು. ಅದೇ ಸ್ಥಳದ ಸಮೀಪದಿಂದ ಮೊಸಳೆ ಹೊರಬಂದಿರುವ ಕಾರಣ ಜನರಲ್ಲಿ ಆತಂಕ ಮನೆ ಮಾಡಿದೆ. ಸೆರೆಹಿಡಿದ ಮೊಸಳೆಯನ್ನು ಅರಣ್ಯ ಇಲಾಖೆ ತನ್ನ ಹತ್ತಿರ ಇಟ್ಟುಕೊಂಡಿದ್ದು, ಮೊಸಳೆಯನ್ನು ಬೇರಕಡೆ ಸ್ಥಳಾಂತರಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. ಈ ಕುರಿತು ಅರಣ್ಯಾಧಿಕಾರಿಗಳು ಸಾರ್ವಜನಿಕರೊಂದಿಗೆ ಸಭೆ ನಡೆಸಿ ಚರ್ಚಿಸಲಿದ್ದಾರೆ.

ತಹಶೀಲ್ದಾರ್ ಶೈಲೇಶ ಪರಮಾನಂದ, ಪೌರಾಯುಕ್ತ ರಾಜಾರಾಮ ಪವಾರ, ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಕಿರಣ ಪಾಟೀಲ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಘಟನಾ ಸ್ಥಳದಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT