ಮಂಗಳವಾರ, ಜೂನ್ 15, 2021
27 °C

ಕೋವಿಡ್ ಆರೈಕೆ ಕೇಂದ್ರವಾಗಿ ದಾಂಡೇಲಿ ಇ.ಎಸ್.ಐ ಆಸ್ಪತ್ರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ದಾಂಡೇಲಿಯ ಇ.ಎಸ್.ಐ ಆಸ್ಪತ್ರೆಯನ್ನು ಕೋವಿಡ್ ಆರೈಕೆ ಕೇಂದ್ರವನ್ನಾಗಿ ಬಳಸಿಕೊಳ್ಳಲು ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಯ (ಇ.ಎಸ್.ಐ.ಎಸ್) ನಿರ್ದೇಶನಾಲಯ ಅನುಮತಿ ನೀಡಿದೆ.

ಈ ಆಸ್ಪತ್ರೆಯಲ್ಲಿ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯನ್ನು ಕೋವಿಡ್ ಆರೈಕೆಯ ಕರ್ತವ್ಯಗಳಿಗೆ ನಿಯೋಜಿಸಿಕೊಳ್ಳುವಂತೆಯೂ ಅನುಮತಿ ನೀಡಿದ್ದಾರೆ. ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಇಲಾಖೆಯ ನಿರ್ದೇಶಕರು ಲಿಖಿತವಾಗಿ ಸೂಚನೆ ನೀಡಿದ್ದಾರೆ. 

ಆಸ್ಪತ್ರೆಯಲ್ಲಿ ಪ್ರಸ್ತುತ 15 ಹಾಸಿಗೆಗಳಿದ್ದು, ಹೆಚ್ಚುವರಿಯಾಗಿ 10 ಹಾಸಿಗೆಗಳನ್ನು ನಗರಸಭೆ ವ್ಯವಸ್ಥೆ ಮಾಡಲಿದೆ. ಒಟ್ಟು 25 ಹಾಸಿಗೆಗಳ ಕೋವಿಡ್ ಆರೈಕೆ ಕೇಂದ್ರವಾಗಿ ಈ ಆಸ್ಪತ್ರೆಯ ಬಳಕೆಯಾಗಲಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು