ಗುರುವಾರ , ಸೆಪ್ಟೆಂಬರ್ 23, 2021
21 °C

ದಾಂಡೇಲಿ ನಗರಸಭೆ ವಾರ್ಡ್ ಉಪ ಚುನಾವಣೆ: ಕಾಂಗ್ರೆಸ್‌ಗೆ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಕಾಂಗ್ರೆಸ್ ಅಭ್ಯರ್ಥಿ ಮಹಾದೇವ ಜಮಾದಾರಗೆ ಜಯ

ದಾಂಡೇಲಿ: ನಗರಸಭೆಯ ವಾರ್ಡ್ ನಂಬರ್ 11ರ ಉಪಚುನಾವಣೆ ಫಲಿತಾಂಶ ಸೋಮವಾರ ಹೊರಬಿದ್ದಿದೆ. 191 ಮತಗಳಿಂದ ಕಾಂಗ್ರೆಸ್ ಅಭ್ಯರ್ಥಿ ಮಹಾದೇವ ಜಮಾದಾರ ಜಯಶಾಲಿಯಾಗಿದ್ದಾರೆ.

ನಗರದ ಬಂಗೂರನಗರ ಪದವಿ ಪೂರ್ವ ಕಾಲೇಜಿನಲ್ಲಿ 146 ಮತ್ತು 147 ಮತಗಟ್ಟೆಗಳಲ್ಲಿ ನಡೆದ ಮತದಾನದಲ್ಲಿ  ಶೇಕಡಾ 56.61ರಷ್ಟು ಮತದಾನವಾಗಿತ್ತು. ಒಟ್ಟು 1,662 ಮತದಾರರಲ್ಲಿ  941 ಮತದಾರರು ಹಕ್ಕನ್ನು ಚಲಾಯಿಸಿದ್ದರು.

ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಆದಂ ದೇಸೂರ ಅವರ ನಿಧನದ ನಂತರ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆದಿದ್ದು , ಕಾಂಗ್ರೆಸ್ ಅಭ್ಯರ್ಥಿ ಮಹಾದೇವ ಜಮಾದಾರ, ಬಿಜೆಪಿಯ ಅಭ್ಯರ್ಥಿ ಗೋಪಾಲ ಸಿಂಗ್ ಕಣದಲ್ಲಿ ಇದ್ದರು. 

ಒಟ್ಟು  ಚಲಾವಣೆಯಾದ ಮತಗಳು 941ರಲ್ಲಿ ಕಾಂಗ್ರೆಸ್ ಪಕ್ಷ 561 ಮತಗಳನ್ನು ಪಡೆದರೆ, ಬಿಜೆಪಿ ಪಕ್ಷ 370 ಮತಗಳನ್ನು ಪಡೆದು  ಪರಾಭವಗೊಂಡದೆ. ಇದರಲ್ಲಿ 10 ನೋಟಾ ಮತಗಳು ಚಲಾವಣೆಯಾಗಿವೆ.

ಪಕ್ಷಗಳ ಬಲಾಬಲ: ದಾಂಡೇಲಿಯ ನಗರಸಭೆಯಲ್ಲಿ 31 ವಾರ್ಡುಗಳಲ್ಲಿ 16 ಸ್ಥಾನಗಳನ್ನು ಗೆದ್ದು ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ನಾಲ್ವರು ಪಕ್ಷೇತರರು ಬೆಂಬಲವನ್ನು ನೀಡಿದ್ದಾರೆ. 

ಪ್ರಸ್ತುತ ಬಿಜೆಪಿ 11 ಸ್ಥಾನಗಳನ್ನು ಹೊಂದಿದ್ದು, ಈ ಒಂದು ಸ್ಥಾನವನ್ನು ಗೆದ್ದುಕೊಂಡರೆ 12 ಸ್ಥಾನಗಳನ್ನು ಪಡೆದುಕೊಂಡಂತಾಗುತ್ತಿತ್ತು. ಇದರೊಂದಿಗೆ 4 ಪಕ್ಷೇತರ ಅಭ್ಯರ್ಥಿಗಳನ್ನು ಪಕ್ಷಕ್ಕೆ  ಸೆಳೆದು ಅಧಿಕಾರಕ್ಕೆ ಬರುವ ಲೆಕ್ಕಾಚಾರದಲ್ಲಿ ಬಿಜೆಪಿಗೆ ನಿರಾಶೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು