ದಾಂಡೇಲಿ: ₹ 1.50 ಲಕ್ಷ ಮೌಲ್ಯದ ಗಾಂಜಾ ವಶ

ಕಾರವಾರ: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇಲೆ ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಆರೋಪಿಯೊಬ್ಬನನ್ನು ಸೋಮವಾರ ಬಂಧಿಸಿದ್ದಾರೆ. ಆತನಿಂದ ಸುಮಾರು ₹ 1.50 ಲಕ್ಷ ಮೌಲ್ಯದ 3 ಕೆ.ಜಿ. 250 ಗ್ರಾಂ ಗಾಂಜಾ ಮತ್ತು ಕೃತ್ಯಕ್ಕೆ ಬಳಸಿದ್ದ ಬೈಕ್ ಅನ್ನು ಜಪ್ತಿ ಮಾಡಿದ್ದಾರೆ.
ದಾಂಡೇಲಿಯ 14ನೇ ಬ್ಲಾಕ್ ಟೌನ್‌ಶಿಪ್ ನಿವಾಸಿ ಫಾರೂಖ್ (38) ಬಂಧಿತ ಆರೋಪಿ. ಬರ್ಚಿ ಕ್ರಾಸ್ ಹತ್ತಿರ ಗಾಂಜಾ ಸಾಗಿಸುತ್ತಿರುವ ಮಾಹಿತಿ ಪಡೆದ ಪೊಲೀಸರು, ಡಿ.ವೈ.ಎಸ್.ಪಿ ಗಣೇಶ್ ಕೆ.ಎಲ್, ಸಿ.ಪಿ.ಐ (ಪ್ರಭಾರ) ದಯಾನಂದ ಶೇಗುಣಸಿ ಹಾಗೂ ಪಿ.ಎಸ್.ಐ ಯಲ್ಲಾಲಿಂಗ ಕುನ್ನೂರ ನೇತೃತ್ವದ ತಂಡದಲ್ಲಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದರು.
ದಾಂಡೇಲಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.