ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಝೀಕಾ ಸೋಂಕು: ಮುನ್ನೆಚ್ಚರಿಕೆ ವಹಿಸಿ’

Last Updated 15 ಜುಲೈ 2021, 15:24 IST
ಅಕ್ಷರ ಗಾತ್ರ

ಕಾರವಾರ: ‘ಕೇರಳದಲ್ಲಿ ಈಗಾಗಲೇ ಝೀಕಾ ವೈರಸ್ ಸೋಂಕಿನ ಪ್ರಕರಣಗಳು ಕಂಡುಬಂದಿವೆ. ಹಾಗಾಗಿ ಉತ್ತರ ಕನ್ನಡದಲ್ಲೂ ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ವಹಿಸಬೇಕಾಗಿದೆ’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ನಡೆದ ಅಂತರ್ ಇಲಾಖಾ ಸಮನ್ವಯ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.

‘ಎಲ್ಲ ಇಲಾಖೆಗಳು ಸಮನ್ವಯ ದಿಂದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಬೇಕು. ಇದಕ್ಕಾಗಿ ಕ್ರಿಯಾ ಯೋಜನೆ ತಯಾರು ಮಾಡಬೇಕು. ಯಾವುದೇರೋಗಗಳು ಉಲ್ಬಣ ಗೊಳ್ಳದಂತೆ ನೋಡಿಕೊಳ್ಳುವ ಕಾರ್ಯ ಆಗಬೇಕು’ ಎಂದು ಸೂಚಿಸಿದರು.

ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ರಮೇಶ ರಾವ್ ಮಾತನಾಡಿ, ‘ಇದುವರೆಗೂ ಜಿಲ್ಲೆಯಲ್ಲಿ ಝೀಕಾ ವೈರಸ್ ಸೋಂಕು ಪತ್ತೆಯಾಗಿಲ್ಲ. ಡೆಂಗಿ ಹಾಗೂ ಚಿಕುನ್‍ಗುನ್ಯಾ ಜ್ವರ ಉಂಟುಮಾಡುವ ಪ್ಲೇವಿ ವೈರಸ್ ಮೂಲಕ ಬರುತ್ತದೆ. ಈಡೀಸ್ ಈಜಿಪ್ಟ್ ಸೊಳ್ಳೆ ಕಚ್ಚುವುದಿರಂದ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಸಾಮಾನ್ಯವಾಗಿ ಹಗಲು ಹೊತ್ತಿನಲ್ಲಿ ಕಚ್ಚುತ್ತದೆ. ತೀವ್ರಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿ ಕೊಳ್ಳುವುದು ಪ್ರಮುಖ ಲಕ್ಷಣಗಳಾಗಿವೆ’ ಎಂದರು.

ಉಪ ವಿಭಾಗಾಧಿಕಾರಿ ವಿದ್ಯಾಶ್ರೀ ಚಂದರಗಿ, ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆರ್.ಎಂ.ಒ ಡಾ.ವೆಂಕಟೇಶ, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಲಲಿತಾ ಶೆಟ್ಟಿ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್.ಪುರುಷೋತ್ತಮ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಹೊನ್ನ ಪ್ಪ ಗೌಡ, ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಪಿ.ನಾಗರಾಜ, ತಹಶೀಲ್ದಾರ್ ನಿಶ್ಚಲ ನರೋನಾ, ಟಿಎಚ್‌ಒ ಸೂರಜಾ ನಾಯಕ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT