ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೌಕಾನೆಲೆಗೆ ಕದ್ರಾದಿಂದ ನೀರು: ಪ್ರಸ್ತಾವ ಸಲ್ಲಿಸಿ: ಡಿಸಿ ಡಾ.ಹರೀಶಕುಮಾರ್ ಸೂಚನೆ

Last Updated 18 ಸೆಪ್ಟೆಂಬರ್ 2019, 13:39 IST
ಅಕ್ಷರ ಗಾತ್ರ

ಕಾರವಾರ: ಸೀಬರ್ಡ್ ನೌಕಾನೆಲೆ ಯೋಜನೆಗೆ ಕದ್ರಾ ಜಲಾಶಯದಿಂದ ಕುಡಿಯುವ ನೀರುಸರಬರಾಜಿಗೆ ಸಮಗ್ರ ಯೋಜನಾ ವರದಿ ಸಲ್ಲಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಇಲಾಖೆಗೆ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ಸೂಚಿಸಿದ್ದಾರೆ.

ಯೋಜನೆ ಸಂಬಂಧಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಈಚೆಗೆ ರಾಜ್ಯಮಟ್ಟದ ಸಮನ್ವಯ ಸಮಿತಿ ಸಭೆ ನಡೆದಿತ್ತು. ಅದರಲ್ಲಿಚರ್ಚಿಸಲಾದ ವಿಷಯಗಳ ತುರ್ತು ಅನುಷ್ಠಾನ ಸಂಬಂಧ ನಗರದಲ್ಲಿ ಬುಧವಾರ ಅವರು ಉನ್ನತ ಅಧಿಕಾರಿಗಳ ಸಭೆ ನಡೆಸಿದರು.

ಸೀಬರ್ಡ್ ಯೋಜನೆಗೆ ಗಂಗಾವಳಿ ನದಿಯಿಂದ ನೀರುಹರಿಸಲುಪೈಪ್‍ಲೈನ್ ಅಳವಡಿಸುವ ಕಾಮಗಾರಿ ಈಗಾಗಲೇ ವಿಳಂಬವಾಗಿದೆ. ಗಂಗಾವಳಿ ನದಿ ಬತ್ತಿ ನೀರಿನ ಸಮಸ್ಯೆ ಉದ್ಭವಿಸುವ ಸಾಧ್ಯತೆಯೂಇದೆ. ಗಂಗಾವಳಿ ನದಿಯು ನೌಕಾನೆಲೆಯಿಂದ 42ಕಿಲೋಮೀಟರ್ ದೂರದಲ್ಲಿದೆ.ಕದ್ರಾ ಜಲಾಶಯದಿಂದ30 ಕಿಲೋಮೀಟರ್ಅಂತರದಲ್ಲಿದೆ. ಹಾಗಾಗಿ ಕದ್ರಾ ಜಲಾಶಯದಿಂದ ನೀರು ಸರಬರಾಜು ಮಾಡುವುದು ಸೂಕ್ತವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈ ಸಂಬಂಧಸಮೀಕ್ಷೆ ನಡೆಸಿ ಸಮಗ್ರ ಪ್ರಸ್ತಾವವನ್ನು ಶೀಘ್ರವೇ ಸಲ್ಲಿಸುವಂತೆ ಅವರು ನಗರ ನೀರು ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಇದಕ್ಕೆಸಭೆಯಲ್ಲಿ ಹಾಜರಿದ್ದನೌಕಾನೆಲೆಯಅಧಿಕಾರಿಗಳು ಸಮ್ಮತಿಸಿದರು. ಅಲ್ಲದೆ ಗಂಗಾವಳಿಗೆ ನಿರ್ಮಿಸಲು ಉದ್ದೇಶಿಸಿರುವ ವೆಂಟೆಡ್ ಬ್ಯಾರೇಜ್ ಅನ್ನೂ ಶೀಘ್ರವೇ ಪೂರ್ಣಗೊಳಿಸಲು ಕ್ರಮ ವಹಿಸಲಾಗುವುದು ಎಂದು ಹರೀಶಕುಮಾರ್ ತಿಳಿಸಿದರು.

ನೌಕಾನೆಲೆಗೆ ಶಿರವಾಡದ ಕೊಂಕಣ ರೈಲ್ವೆ ಪ್ರದೇಶದಲ್ಲಿ ನಿರ್ಮಿಸಲು ಉದ್ದೇಶಿಸಿರುವ220ಕೆ.ವಿ ಸಾಮರ್ಥ್ಯದ ವಿದ್ಯುತ್ ಉಪಸ್ಥಾವರ ಘಟಕಕ್ಕೆ ಅನುಮೋದನೆ ಪಡೆಯಲಾಗಿದೆ. ಇದುಶೀಘ್ರವೇ ಅನುಷ್ಠಾನವಾಗಲಿದೆ. ಈ ಬಗ್ಗೆ ಹೆಸ್ಕಾಂಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ವಿಮಾನ ನಿಲ್ದಾಣ ಕುರಿತು ಸಭೆ: ಅಂಕೋಲಾ ತಾಲ್ಲೂಕಿನಅಲಗೇರಿಯಲ್ಲಿ ಸೀಬರ್ಡ್ ನೌಕಾನೆಲೆಯ ಭಾಗವಾಗಿ ನಾಗರಿಕ ವಿಮಾನ ನಿಲ್ದಾಣ ನಿರ್ಮಿಸಲು ಉದ್ದೇಶಿಸಲಾಗಿದೆ. ಇದಕ್ಕೆಸಂಬಂಧಿಸಿದಂತೆ ಮುಂದಿನ ವಾರ ಮೂಲ ಸೌಲಭ್ಯ ಅಭಿವೃದ್ಧಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಿಲ್ಲೆಗೆಭೇಟಿ ನೀಡಲಿದ್ದಾರೆ. ವಿಮಾನ ನಿಲ್ದಾಣಅವರು ಸಭೆ ನಡೆಸಲಿದ್ದಾರೆ ಎಂದು ಡಾ.ಕೆ.ಹರೀಶಕುಮಾರ್ ತಿಳಿಸಿದರು.

ಹೆಚ್ಚುವರಿಜಿಲ್ಲಾಧಿಕಾರಿ ನಾಗರಾಜ ಸಿಂಗ್ರೇರ್, ಸೀಬರ್ಡ್ ಯೋಜನೆ ಅನುಷ್ಠಾನ ಉಪನಿರ್ದೇಶಕ ಕ್ಯಾಪ್ಟನ್ ಕಿರಣ ರೆಡ್ಡಿ, ಕಾರವಾರ ಉಪ ಅರಣ್ಯ ಸಂರಕ್ಷಣಾಧಿಕಾರಿ ವಸಂತರೆಡ್ಡಿ, ಕಾರವಾರ ಉಪ ವಿಭಾಗಾಧಿಕಾರಿ ಅಭಿಜಿನ್, ತಹಶೀಲ್ದಾರರಾದ ಆರ್.ವಿ.ಕಟ್ಟಿ, ಅಶೋಕ್ ಗುರಾಣಿ, ಕರ್ನಾಟಕ ನಗರ ನೀರು ಸರಬರಾಜು ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಪಿ.ಸುರೇಶ್, ಬಂದರು ಅಧಿಕಾರಿ ಕ್ಯಾಪ್ಟನ್ ಗಾಂವ್ಕರ್, ಐ.ಆರ್‌.ಬಿಮುಖ್ಯ ಪ್ರಧಾನ ವ್ಯವಸ್ಥಾಪಕ ಮೋಹನ್ ದಾಸ್, ಕೊಂಕಣ ರೈಲ್ವೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅನಂತಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT