ಬುಧವಾರ, ಜನವರಿ 29, 2020
24 °C

ಕಾರವಾರ: ತಲೆ ಸುತ್ತುಬಂದು ಬಳಲಿದ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ನಗರದ ವಾರ್ತಾ ಭವನದಲ್ಲಿ ಗುರುವಾರ ಆಯೋಜಿಸಿದ್ದ ‘ವಾರ್ತಾ ಸ್ಪಂದನ’ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ಹರೀಶಕುಮಾರ್ ತಲೆ ಸುತ್ತುಬಂದು ಕುಳಿತಲ್ಲೇ ಕುಸಿದರು. ಒಂದೆರಡು ನಿಮಿಷಗಳ ಬಳಿಕ ಸುಧಾರಿಸಿಕೊಂಡು ಕಾರ್ಯಕ್ರಮ ಉದ್ಘಾಟಿಸಿದರು.

ವಾರ್ತಾ ಇಲಾಖೆಯ ಮೊದಲ ಫೋನ್ ಇನ್ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳನ್ನು ಕರೆಸಲಾಗಿತ್ತು. ಕಾರ್ಯಕ್ರಮ ಆರಂಭವಾಗುತ್ತಿದ್ದಂತೆ ಜಿಲ್ಲಾಧಿಕಾರಿ ಪ್ರಜ್ಞೆ ತಪ್ಪಿದರು. ಸ್ಥಳದಲ್ಲಿದ್ದ ವೈದ್ಯರು ಹಾಗೂ ಪತ್ರಕರ್ತರು ಕೂಡಲೇ ಅವರನ್ನು ಉಪಚರಿಸಿದರು.

ಒಂದೆರಡು ನಿಮಿಷಗಳ ಬಳಿಕ ಸುಧಾರಿಸಿಕೊಂಡು ಕಾರ್ಯಕ್ರಮ ಉದ್ಘಾಟಿಸಿ ಭಾಷಣ ಮಾಡಿದರು. ಬಳಿಕ ಮನೆಗೆ ತೆರಳಿ ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದು ಪುನಃ ತಮ್ಮ ಕಚೇರಿಗೆ ಬಂದು ಕರ್ತವ್ಯ ನಿರ್ವಹಿಸಿದರು. ಇದೇವೇಳೆ ವೈದ್ಯರಿಂದ ಆರೋಗ್ಯ ತಪಾಸಣೆಯನ್ನೂ ಮಾಡಿಸಿಕೊಂಡರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು