ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಆರೋಹಣಕ್ಕೆ ಸೂಚನೆ

Last Updated 26 ಜುಲೈ 2022, 14:29 IST
ಅಕ್ಷರ ಗಾತ್ರ

ಕಾರವಾರ: ‘ದೇಶದ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ, ‘ಮನೆ ಮನೆಯಲ್ಲಿ ತ್ರಿವರ್ಣ ಧ್ವಜ’ ಅಭಿಯಾನವನ್ನು ಆ.13ರಿಂದ 15ರವರೆಗೆ ಹಮ್ಮಿಕೊಳ್ಳಲಾಗುತ್ತಿದೆ. ಈ ದಿನಗಳಂದು ಎಲ್ಲ ಮನೆಗಳು, ಸರ್ಕಾರಿ ಕಚೇರಿಗಳು, ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಆರೋಹಣ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದಲ್ಲಿ ಮಂಗಳವಾರ ನಡೆದ, ಸ್ವಾತಂತ್ರ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯಲ್ಲಿ ಎರಡು ವರ್ಷಗಳಲ್ಲಿ ಕೋವಿಡ್ ಕಾರಣಗಳಿಂದ ಸ್ವಾತಂತ್ರ್ಯೋತ್ಸವವನ್ನು ಸರಳವಾಗಿ ಆಚರಣೆ ಮಾಡಲಾಗಿತ್ತು. ಈ ವರ್ಷ 75ನೇ ಸ್ವಾತಂತ್ರ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಬೇಕು. ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ ಶಾಲೆ, ಕಾಲೇಜುಗಳು ಮತ್ತು ಸ್ಥಳೀಯ ಸಂಸ್ಥೆಯವರು ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಬೇಕು’ ಎಂದರು.

‘ಪೊಲೀಸ್ ಪರೇಡ್ ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವವರು ಧ್ವಜಾರೋಹಣ ನಡೆಸುವರು. ಸಾರ್ವಜನಿಕರಿಗೆ ಆಸನ ವ್ಯವಸ್ಥೆ, ಮಳೆಯಿರುವ ಕಾರಣ ಶಾಮಿಯಾನ, ಪಥಸಂಚಲನ, ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪಟ್ಟಿ ಮಾಡಿ ಸಿದ್ಧತೆ ಮಾಡಿಕೊಳ್ಳಿ’ ಎಂದು ಸೂಚಿಸಿದರು.

‘ನಗರದ ವಿವಿಧ ವೃತ್ತಗಳು, ವಿವಿಧ ಇಲಾಖಾ ಮುಖ್ಯಸ್ಥರು ತಮ್ಮ ಕಚೇರಿಗಳನ್ನು ತಳಿರು ತೋರಣಗಳಿಂದ ಸಿಂಗರಿಸಬೇಕು. ವಿದ್ಯುತ್ ದೀಪಾಲಂಕಾರ ಮಾಡಬೇಕು. ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು’ ಎಂದು ನಿರ್ದೇಶನ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಪ್ರಿಯಾಂಗಾ.ಎಂ, ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಹಾಗೂ ವಿವಿಧ ಅಧಿಕಾರಿಗಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT