ಉತ್ತರ ಕನ್ನಡ: ಚುನಾವಣೆಯ ಅಂತಿಮ ಸಿದ್ಧತೆ ಪರಿಶೀಲನೆ

ಗುರುವಾರ , ಮೇ 23, 2019
27 °C

ಫಲಿತಾಂಶ (ಮುನ್ನಡೆ+ಗೆಲುವು) 0/542LIVE

ಉತ್ತರ ಕನ್ನಡ: ಚುನಾವಣೆಯ ಅಂತಿಮ ಸಿದ್ಧತೆ ಪರಿಶೀಲನೆ

Published:
Updated:
Prajavani

ಕಾರವಾರ: ಲೋಕಸಭೆ ಚುನಾವಣೆಗೆ ಕುಮಟಾ ಮತ್ತು ಭಟ್ಕಳ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದಿರುವ ಅಂತಿಮ ಸಿದ್ಧತೆಗಳನ್ನು ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ ಕುಮಾರ್ ಶುಕ್ರವಾರ ಪರಿಶೀಲಿಸಿದರು.

ಕುಮಟಾದ ಮತ ಎಣಿಕೆ ಕೇಂದ್ರಕ್ಕೂ ಭೇಟಿ ನೀಡಿದರು. ತಾಲ್ಲೂಕು ಕೇಂದ್ರದಲ್ಲಿ ಸಹಾಯಕ ಚುನಾವಣಾಧಿಕಾರಿಗಳು, ಸಂಚಾರ ಜಾಗೃತಿ ದಳದ ನೋಡಲ್ ಅಧಿಕಾರಿಗಳು, ಮಾದರಿ ನೀತಿ ಸಂಹಿತೆಯ ಸಹಾಯಕ ನೋಡಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದರು.

‘ಏ.21ರಂದು ಸಂಜೆ 6ಕ್ಕೆ ಬಹಿರಂಗ ಪ್ರಚಾರ ಅಂತ್ಯವಾಗಲಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತೀವ್ರ ಎಚ್ಚರ ವಹಿಸಬೇಕು. ಮಸ್ಟರಿಂಗ್ ಮತ್ತು ಡಿ ಮಸ್ಟರಿಂಗ್, ಮತಗಟ್ಟೆ ಅಧಿಕಾರಿಗಳ ಜವಾಬ್ದಾರಿ ನಿರ್ವಹಣೆ ಸೇರಿದಂತೆ ವಿವಿಧ ಕರ್ತವ್ಯಗಳನ್ನು ಸರಿಯಾಗಿ ನಿರ್ವಹಿಸಬೇಕು. ಚುನಾವಣೆಗೆ ಸಂಬಂಧಿಸಿದಂತೆ ಗೊಂದಲಗಳಿದ್ದಲ್ಲಿ ತಕ್ಷಣ ಮಾಹಿತಿಯನ್ನು ರವಾನಿಸಬೇಕು. ಅದಕ್ಕೆ ಸಂಬಂಧಿಸಿದ ಪರ್ಯಾಯ ವ್ಯವಸ್ಥೆ ಮಾಡುವುದು ಸಹಾಯಕ ಚುನಾವಣಾಧಿಕಾರಿಗಳ ಜವಾಬ್ದಾರಿ’ ಎಂದು ಅವರು ಹೇಳಿದರು.

ಲೋಕಸಭಾ ಚುನಾವಣೆಯಲ್ಲಿ ವಿಶೇಷವಾಗಿ ಅಂಗವಿಕಲ ಮತದಾರರಿಗೆ ಸೌಲಭ್ಯ ಕಲ್ಪಿಸುವ ಸಂಬಂಧ ವಿಶೇಷ ಗಮನ ಹರಿಸಬೇಕು. ಚುನಾವಣಾ ವೀಕ್ಷಕರು ಹಾಗೂ ಮುಖ್ಯ ಚುನಾವಣಾಧಿಕಾರಿ ಕಚೇರಿಯಿಂದ ಕೋರುವ ಮಾಹಿತಿಯನ್ನು ತಕ್ಷಣ ಕೊಡಲು ತಯಾರಿರಬೇಕು ಎಂದರು.

ಕುಮಟಾ ಉಪ ವಿಭಾಗಾಧಿಕಾರಿ ಪ್ರೀತಿ ಗೆಹ್ಲೋಟ್, ಐಎಎಸ್ ಪ್ರೊಬೆಷನರ್ ದಿಲೀಶ್ ಸಸಿ ಜೊತೆಗಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !