ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರದರ್ಶಕ ಚುನಾವಣೆಗೆ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಸೂಚನೆ

Last Updated 18 ಮೇ 2022, 15:40 IST
ಅಕ್ಷರ ಗಾತ್ರ

ಕಾರವಾರ: ‘ಪಶ್ಚಿಮ ಕ್ಷೇತ್ರ ಶಿಕ್ಷಕರ ಚುನಾವಣೆಯನ್ನು ಪಾರದರ್ಶಕವಾಗಿ, ಕಾನೂನು ಬದ್ಧವಾಗಿ ನಡೆಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಎಲ್ಲ ತಹಶೀಲ್ದಾರರಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಅವರು ಮಾತನಾಡಿದರು.

‘ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಕಾರ್ಯ ನಿರ್ವಹಿಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶ ನೀಡಬಾರದು’ ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಮಾತನಾಡಿ, ‘ಸರ್ಕಾರಿ ನೌಕರರು ಚುನಾವಣೆಯಲ್ಲಿ ಅಭ್ಯರ್ಥಿಗಳ ಪರವಾಗಿ ಯಾವುದೇ ರೀತಿಯಲ್ಲೂ ಮತದಾರರ ಮೇಲೆ ಪ್ರಭಾವ ಬೀರಬಾರದು. ಸಚಿವರು, ಶಾಸಕರು ಚುನಾವಣೆ ಸಭೆಗಳಲ್ಲಿ ಭಾಗವಹಿಸುವಂತಿಲ್ಲ. ಹೊಸ ಕಾಮಗಾರಿಗಳಿಗೆ ಚಾಲನೆ, ಭೂಮಿಪೂಜೆ, ಉದ್ಘಾಟನೆ ಮಾಡಿದರೆ ಅಪರಾಧವಾಗುತ್ತದೆ’ ಎಂದು ತಿಳಿಸಿದರು.

‘ಪಕ್ಷಬೇಧವಿಲ್ಲದೇ ಎಲ್ಲ ಪಕ್ಷದ ಅಭ್ಯರ್ಥಿಗಳಿಗೂ ಚುನಾವಣೆ ಸಭೆ ನಡೆಸಲು ಅನುಮತಿ ನೀಡಬೇಕು. ಅಭ್ಯರ್ಥಿಗಳ ಮಧ್ಯೆ ಗಲಾಟೆ ಉಂಟಾಗದಂತೆ ಸೂಕ್ತ ಸಮಯ, ಸ್ಥಳ ನಿಗದಿ ಮಾಡಿಕೊಡಬೇಕು’ ಎಂದು ತಹಶೀಲ್ದಾರರಿಗೆ ಸೂಚಿಸಿದರು.

‘ತಹಶೀಲ್ದಾರರು ಪ್ರತಿ ತಾಲ್ಲೂಕಿನಲ್ಲಿ ವಿಡಿಯೊ ತಂಡ ರಚಿಸಿ, ಪ್ರತಿ ಅಭ್ಯರ್ಥಿಯ ಸಭೆಗಳನ್ನು ವಿಡಿಯೊ ಚಿತ್ರೀಕರಣ ಮಾಡಬೇಕು. ಪ್ರತಿದಿನದ ಮಾಹಿತಿಯನ್ನು ಸಲ್ಲಿಸಬೇಕು. ಪ್ರಚಾರ ಸಭೆ ನಡೆಸಲು, ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್ ಹಾಗೂ ಮಾಧ್ಯಮದ ಬಳಕೆಯ ಬಗ್ಗೆ ಸೂಕ್ತ ಪ್ರಾಧಿಕಾರಿಯಿಂದ ಅನುಮತಿ ಪಡೆಯಬೇಕು’ ಎಂದರು.

ಸಭೆಯಲ್ಲಿ ಡಿ.ವೈ.ಎಸ್‌.ಪಿ ವ್ಯಾಲೆಂಟೈನ್ ಡಿಸೋಜಾ, ಉಪ ವಿಭಾಗಾಧಿಕಾರಿ ಜಯಲಕ್ಷ್ಮೀ ರಾಯಕೊಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT