ಶಿರಸಿ: ಕುಡಿಯುವ ನೀರು: ತ್ವರಿತ ಸ್ಪಂದಿಸಲು ಸೂಚನೆ

ಸೋಮವಾರ, ಮೇ 27, 2019
27 °C
ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿ ಎಚ್.ಹರೀಶಕುಮಾರ್

ಶಿರಸಿ: ಕುಡಿಯುವ ನೀರು: ತ್ವರಿತ ಸ್ಪಂದಿಸಲು ಸೂಚನೆ

Published:
Updated:
Prajavani

ಶಿರಸಿ: ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸುವ ಜತೆಗೆ ಮಳೆಗಾಲ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಚ್.ಹರೀಶಕುಮಾರ್ ಅವರು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗುರುವಾರ ಇಲ್ಲಿ ಎಲ್ಲ ಅಧಿಕಾರಿಗಳ ಸಭೆ ನಡೆಸಿದ ಅವರು, ಕುಡಿಯುವ ನೀರಿನ ಸಮಸ್ಯೆಯನ್ನು ಆದ್ಯತೆ ಮೇಲೆ ನಿವಾರಿಸಬೇಕು, ಜಾನುವಾರಿಗೆ ಮೇವಿನ ಕೊರತೆಯಾಗದಂತೆ ನಿಗಾವಹಿಸಬೇಕು ಎಂದರು.

ಪೌರಾಯುಕ್ತೆ ಅಶ್ವಿನಿ ಬಿ.ಎಂ ಮಾಹಿತಿ ನೀಡಿ, ‘ನಗರದಲ್ಲಿ ಎರಡು ದಿನಗಳಿಗೊಮ್ಮೆ ನೀರು ಬಿಡಲಾಗುತ್ತಿದೆ. ಸಕಾಲಕ್ಕೆ ಮುಂಗಾರು ಆರಂಭವಾದರೆ ನೀರಿನ ಸಮಸ್ಯೆ ಬಗೆಹರಿಯಲಿದೆ’ ಎಂದರು. ಸರಿಯಾಗಿ ನೀರು ಪೂರೈಕೆ ಮಾಡಿ, ಜನರಿಗೆ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು. ಮಳೆಗಾಲದ ಪೂರ್ವದಲ್ಲಿ ಚರಂಡಿ ಸ್ವಚ್ಛಗೊಳಿಸಬೇಕು ಎಂದು ಡಿಸಿ ತಿಳಿಸಿದರು.

ತಾಲ್ಲೂಕಿನಲ್ಲಿ 74ಸಾವಿರ ಜಾನುವಾರು ಇದೆ. ಸದ್ಯ ಮೇವಿನ ಸಮಸ್ಯೆ ಇಲ್ಲ ಎಂದು ಪಶುಸಂಗೋಪನಾ ಇಲಾಖೆ ಅಧಿಕಾರಿ ತಿಳಿಸಿದರು. ಮಳೆಗಾಲಕ್ಕೆ ಪೂರ್ವಭಾವಿಯಾಗಿ ಔಷಧ ಸಂಗ್ರಹ ಇಟ್ಟುಕೊಳ್ಳಬೇಕು. ಸಾಂಕ್ರಾಮಿಕ ರೋಗ ಹರಡದಂತೆ ಆರೋಗ್ಯ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ಹರೀಶಕುಮಾರ್ ಸೂಚಿಸಿದರು.

ಜಿಲ್ಲಾ ಕೇಂದ್ರ ಕಾರವಾರದಲ್ಲಿ ಎರಡು ಕಡೆ ನೀರಿನ ಸಮಸ್ಯೆಯಾಗಿದ್ದು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮಾಂತರ ಭಾಗದಲ್ಲಿ 50 ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಇಂತಹ ಊರಿಗೆ ನಿತ್ಯ ಎರಡು ಬಾರಿ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ.

27 ಖಾಸಗಿ ಕೊಳವೆಬಾವಿಗಳನ್ನು ನೀರಿನ ಮೂಲಕ್ಕೆ ಬಳಸಿಕೊಳ್ಳಲಾಗುತ್ತಿದೆ. ಸಮಸ್ಯೆ ಕಾಣಿಸಿಕೊಂಡ ನಗರ ಭಾಗದಲ್ಲಿ ಎಂಟು ತಾಸಿನೊಳಗೆ ಹಾಗೂ ಗ್ರಾಮೀಣ ಭಾಗದಲ್ಲಿ 18 ತಾಸಿನೊಳಗೆ ನೀರು ಪೂರೈಕೆ ಮಾಡಲು ಕ್ರಮವಹಿಸಲಾಗಿದೆ. ಆಯಾ ಉಪವಿಭಾಗದಲ್ಲಿ ವಿಶೇಷ ನಿಗಾವಹಿಸಲು ಉಪವಿಭಾಗಾಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ಹೇಳಿದರು. ಉಪವಿಭಾಗಾಧಿಕಾರಿ ಡಾ. ಈಶ್ವರ ಉಳ್ಳಾಗಡ್ಡಿ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !