ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿಸಿ ಬ್ಯಾಂಕ್‌: ಅಧ್ಯಯನದ ಬಳಿಕ ವಿಲೀನ ಪ್ರಸ್ತಾವ

Last Updated 5 ಏಪ್ರಿಲ್ 2022, 15:49 IST
ಅಕ್ಷರ ಗಾತ್ರ

ಶಿರಸಿ: ‘ಅಪೆಕ್ಸ್ ಬ್ಯಾಂಕ್ ಮತ್ತು ಜಿಲ್ಲಾ ಮಧ್ಯವರ್ತಿ (ಡಿಸಿಸಿ) ಬ್ಯಾಂಕ್‍ಗಳು ವಿಲೀನಗೊಂಡ ರಾಜ್ಯಗಳಿಗೆ ಉನ್ನತ ಅಧಿಕಾರಿಗಳ ತಂಡವನ್ನು ಶೀಘ್ರವೇ ಅಧ್ಯಯನ ಪ್ರವಾಸಕ್ಕೆ ಕಳುಹಿಸಿ, ವರದಿ ಪಡೆಯಲಾಗುವುದು’ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.

ತಾಲ್ಲೂಕಿನ ಹನುಮಂತಿಯಲ್ಲಿ ಮಂಗಳವಾರ ಮಾಧ್ಯಮದವರ ಜತೆ ಮಾತನಾಡಿದ ಅವರು, ‘ವಿಲೀನದ ಬಳಿಕ ಆಯಾ ರಾಜ್ಯಗಳಲ್ಲಿರುವ ಸ್ಥಿತಿಗತಿ ಪರಿಶೀಲಿಸಿ ಕರ್ನಾಟಕದಲ್ಲೂ ವಿಲೀನ ಪ್ರಕ್ರಿಯೆ ಕೈಗೊಳ್ಳಬೇಕೆ ಅಥವಾ ಬೇಡವೆ ಎಂಬುದರ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗುತ್ತದೆ’ ಎಂದು ತಿಳಿಸಿದರು.

‘ರಾಜ್ಯದಲ್ಲಿ ಡಿಸಿಸಿ ಬ್ಯಾಂಕುಗಳು ಬೃಹತ್ ಆರ್ಥಿಕ ಸಂಸ್ಥೆಗಳಾಗಿ ಬೆಳೆದಿವೆ. ಏಕಾಏಕಿ ವಿಲೀನ ನಿರ್ಧಾರ ಕೈಗೊಳ್ಳುವುದು ಸುಲಭವಲ್ಲ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT