ಕುಮಟಾ (ಉತ್ತರ ಕನ್ನಡ): ‘ತಮ್ಮ ವಿರುದ್ಧ ಬಂದಿರುವ ಆರೋಪಗಳು ಸಂಪೂರ್ಣ ಸುಳ್ಳು ಎಂದು ರಮೇಶ ಜಾರಕಿಹೊಳಿ ಹೇಳಿದ್ದಾರೆ. ನಾನೂ ಅದನ್ನೇ ಪುನರುಚ್ಚರಿಸುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದರು.

ಪಟ್ಟಣದಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ತಮ್ಮ ವಿರುದ್ಧದ ವಿಡಿಯೊವನ್ನು ದುರುದ್ದೇಶದಿಂದ ಮಾಡಲಾಗಿದೆ ಎಂದು ರಮೇಶ ಅವರು ಹೇಳಿದ್ದಾರೆ. ಹಾಗಾಗಿ ಈ ಸಂದರ್ಭದಲ್ಲಿ ಹೆಚ್ಚೇನೂ ಹೇಳಲು ನಾನು ಬಯಸುವುದಿಲ್ಲ. ತಮಗೂ ವಿಡಿಯೊಗೂ ಸಂಬಂಧವಿಲ್ಲ, ನಕಲಿ ವಿಡಿಯೊ ಸೃಷ್ಟಿಸಲಾಗಿದೆ ಎಂದು ಅವರು ಬಹಳ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ ಇದರಲ್ಲಿ ಇನ್ನೇನಿದೆ’ ಎಂದು ಮರು ಪ್ರಶ್ನಿಸಿದರು.

‘ಅವರ ವಿರುದ್ಧದ ದೂರನ್ನು ಪರಿಶೀಲಿಸಿ ಕಾನೂನಾತ್ಮಕವಾಗಿ ಕ್ರಮ ಕೈಗೊಳ್ಳಲಾಗುವುದು’ ಎಂದೂ ಇದೇ ವೇಳೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.