ಶುಕ್ರವಾರ, ಜುಲೈ 1, 2022
27 °C

ಕಾರವಾರ: ಜಲಾಂತರ್ಗಾಮಿಯಲ್ಲಿ ರಕ್ಷಣಾ ಸಚಿವ ರಾಜನಾಥ ಸಿಂಗ್ ಪ್ರಯಾಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಾರವಾರ: ಇಲ್ಲಿನ ಐ.ಎನ್.ಎಸ್ ಕದಂಬ ನೌಕಾನೆಲೆಗೆ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ ಸಿಂಗ್, ಶುಕ್ರವಾರ ಬೆಳಿಗ್ಗೆ ಜಲಾಂತರ್ಗಾಮಿ 'ಐ.ಎನ್.ಎಸ್ ಖಂಡೇರಿ'ಯಲ್ಲಿ ಸಮುದ್ರ ಯಾನ ಮಾಡಿದರು. ಸಮುದ್ರದಲ್ಲಿ ಕೈಗೊಳ್ಳಲಾಗುವ ವಿವಿಧ‌ ಕಾರ್ಯಾಚರಣೆಗಳ ಮಾಹಿತಿಗಳನ್ನು ಪಡೆದುಕೊಂಡರು.

ಐ.ಎನ್.ಎಸ್ ಖಂಡೇರಿ ಜಲಾಂತರ್ಗಾಮಿಯು ಸಂಪೂರ್ಣ ಸ್ವದೇಶಿ ನಿರ್ಮಾಣವಾಗಿದೆ. ಮುಂಬೈನ ಮಜಗಾಂ ಡಾಕ್ ಯಾರ್ಡ್‌ನಲ್ಲಿ ನಿರ್ಮಿಸಲಾಗಿರುವ ಈ ನೌಕೆಯನ್ನು ರಾಜನಾಥ ಸಿಂಗ್ ನೇತೃತ್ವದಲ್ಲಿ 2019ರಲ್ಲಿ ನೌಕಾಪಡೆಗೆ ಸೇರ್ಪಡೆಗೊಳಿಸಲಾಗಿತ್ತು. 

ನೌಕಾನೆಲೆಯಲ್ಲಿ ಶುಕ್ರವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಅವರು, ಸೂರ್ಯೋದಯದ ವೇಳೆಗೆ ನೌಕಾನೆಲೆಯ ಕಾಮತ್ ಬೀಚ್‌ನಲ್ಲಿ ಯೋಗಾಸನ ಮಾಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು