ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊನ್ನಾವರ: ಹೆಣ್ಣು ಚಿರತೆಯ ಕಳೇಬರ ಪತ್ತೆ

Last Updated 19 ಫೆಬ್ರುವರಿ 2020, 7:13 IST
ಅಕ್ಷರ ಗಾತ್ರ

ಕಾರವಾರ: ಹೊನ್ನಾವರ ತಾಲ್ಲೂಕಿನ ಕಡ್ಲೆ ಗ್ರಾಮದ ಬರಗದ್ದೆಯ ಹಾಡಿ ಜಾಗದಲ್ಲಿ ಹೆಣ್ಣು ಚಿರತೆಯೊಂದರ ಕಳೇಬರ ಮಂಗಳವಾರ ಸಂಜೆ ಪತ್ತೆಯಾಗಿದೆ.

ಚಿರತೆಗೆ ಎರಡು ಅಥವಾ ಮೂರು ವರ್ಷಗಳಾಗಿರಬಹುದು ಎಂದು ಅಂದಾಜಿಸಲಾಗಿದ್ದು, ಸಹಜ ಸಾವು ಎಂದು ಪಶುವೈದ್ಯರು ತಿಳಿಸಿದ್ದಾಗಿ ಅರಣ್ಯಾಧಿಕಾರಿಗಳು ಹೇಳಿದ್ದಾರೆ.

ಕಳೆದ ಶನಿವಾರ ಗ್ರಾಮದ ಗೇರು ನೆಡುತೋಪಿನಲ್ಲಿ ನಡೆದುಕೊಂಡು ಬರುತ್ತಿದ್ದ ಗ್ರಾಮಸ್ಥ ವೆಂಕಟರಮಣ ಹೆಗಡೆ ಅವರ ಮೇಲೆ ಚಿರತೆಯೊಂದು ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿತ್ತು. ಆ ಜಾಗದಿಂದ ಸುಮಾರು 200 ಮೀಟರ್ ದೂರದಲ್ಲಿ ಚಿರತೆಯ ಕಳೇಬರ ಕಂಡುಬಂದಿದೆ. ಇದು ಅದರದ್ದೇ ಮೃತದೇಹ ಎನ್ನುವುದು ಖಚಿತವಾಗಿಲ್ಲ.

ಕಳೇಬರವನ್ನು ಬುಧವಾರ ಬೆಳಿಗ್ಗೆ ಮರಣೋತ್ತರ ಪರೀಕ್ಷೆ ನಡೆಸಿ ಸುಟ್ಟುಹಾಕಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT