ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕರ್ಣ: ಅಭಿವೃದ್ಧಿ ಕಾಮಗಾರಿಗೆ ಶಾಸಕರಿಂದ ಚಾಲನೆ

₹ 40 ಲಕ್ಷ ವೆಚ್ಚದಲ್ಲಿ ಪಶು ಆಸ್ಪತ್ರೆ ನಿರ್ಮಾಣ
Last Updated 30 ನವೆಂಬರ್ 2020, 2:17 IST
ಅಕ್ಷರ ಗಾತ್ರ

ಗೋಕರ್ಣ: ಕುಮಟಾ ವಿಧಾನಸಭಾ ಕ್ಷೇತ್ರದ ಶಾಸಕ ದಿನಕರ ಶೆಟ್ಟಿ ಗೋಕರ್ಣ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಮೂಡಂಗಿ ಬಳಿ ಖಾರ್ಲೆಂಡಿನ ಪುನರುಜ್ಜೀವನ ಕಾಮಗಾರಿಗೆ ಚಾಲನೆ ನೀಡಿದರು. ಒಟ್ಟು ₹ 50 ಲಕ್ಷ ರೂಪಾಯಿ ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ ನಡೆಯಲಿದೆ. ಲೋಕೋಪಯೋಗಿ ಇಲಾಖೆಯ 2019-20ನೇ ಸಾಲಿನ ರಾಜ್ಯ ಹೆದ್ದಾರಿ ಸೇತುವೆ ಸುಧಾರಣೆ ಅಡಿ ಗೋಕರ್ಣದ ಮೇನ್ ಬೀಚಿಗೆ ಹೋಗುವ ಸೇತುವೆಯ ಪುನರ್ ನಿರ್ಮಾಣ ಕಾಮಗಾರಿಗೆ ಮುಹೂರ್ತ ನೆರವೇರಿಸಿದರು. ಒಟ್ಟು ₹ 101.87 ಲಕ್ಷ ಅಂದಾಜು ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ.

ಇಲ್ಲಿಯ ಪಶು ಆಸ್ಪತ್ರೆಯ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿದರು. ಒಟ್ಟು ₹ 40 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಪಶು ಆಸ್ಪತ್ರೆ ನಿರ್ಮಾಣವಾಗಲಿದೆ. ಪಶು ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟಿಸಲಾಗಿತ್ತು. ₹ 26 ಲಕ್ಷ ವೆಚ್ಚದ ಅಜ್ಜೀಹಕ್ಕಲು ಸರ್ಕಾರಿ ಶಾಲೆಯ ನೂತನ ಕೊಠಡಿ ಹಾಗೂ ಶೌಚಾಲಯವನ್ನು ಉದ್ಘಾಟಿಸಿದರು.

ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ನಾನೇ ಶಾಸಕನಾಗಿದ್ದಾಗ ಹಿಂದುಳಿದ ವರ್ಗ, ಮೀನುಗಾರಿಕಾ ಪ್ರದೇಶ ಸೇರಿದಂತೆ ಅನೇಕ ಕಡೆ ₹ 5 ಕೋಟಿಗೂ ಹೆಚ್ಚು ಅಭಿವೃದ್ಧಿ ಕಾರ್ಯ ಮಾಡಿದ್ದೆ. ಈಗ ಮತ್ತೆ ಅದೇ ಬಿಜೆಪಿ ಸರ್ಕಾರವಿದೆ. ನಾನೇಶಾಸಕನಾಗಿದ್ದೇನೆ. ಬಿಜೆಪಿ ಸರ್ಕಾರದಲ್ಲಿ ನಡೆದಷ್ಟು ಅಭಿವೃದ್ಧಿ ಕಾರ್ಯ ಮತ್ಯಾವ ಸರ್ಕಾರದ ಅವಧಿಯಲ್ಲಿಯೂ ನಡೆದಿಲ್ಲ.
ಮುಂದಿನ ದಿನಗಳಲ್ಲಿ ಈ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಹಮ್ಮಿಕೊಳ್ಳಲಾಗುವುದು ಎಂದರು. ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ನಡೆಸುವಂತೆ ಅಧಿಕಾರಿಗಳು ಹಾಗೂ ನಾಗರಿಕರು ಗಮನವಿಡಬೇಕೆಂದು ಎಚ್ಚರಿಸಿದರು.

ತಾ.ಪಂ ಕಾರ್ಯನಿರ್ವಹಣಾಧಿಕಾರಿ ಸಿ.ಟಿ. ನಾಯಕ, ಗ್ರಾಮ ಪಂಚಾಯ್ತಿ ಆಡಳಿತಾಧಿಕಾರಿ ಆರ್.ಜಿ. ಗುನಗಿ, ತಾಲ್ಲೂಕು ಪಂಚಾಯ್ತಿ ಸದಸ್ಯ ಮಹೇಶ ಶೆಟ್ಟಿ, ಕುಮಟಾ ಎ.ಪಿ.ಎಂ.ಸಿ. ಅಧ್ಯಕ್ಷ ರಮೇಶ ಪ್ರಸಾದ, ಪಿಡಿಒ ವಿನಯಕುಮಾರ, ಕಾರ್ಯದರ್ಶಿ ಶ್ರೀಧರ ಬೋಮ್ಕರ್, ಗ್ರಾಮ ಪಂಚಾಯ್ತಿ ಸದಸ್ಯರಾದ ಶೇಖರ ನಾಯ್ಕ, ಪ್ರಭಾಕರ ಪ್ರಸಾದ, ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವಸಂತ ಶೆಟ್ಟಿ ಹಾಗೂ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT