ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

’ಶಿಕ್ಷಣದಲ್ಲಿ ಯೋಗ ಸೇರ್ಪಡೆಗೊಳ್ಳಲಿ’

ಬೆಳಗಾವಿ ವಿಭಾಗ ಮಟ್ಟದ ಯೋಗಾಸನ ಸ್ಪರ್ಧೆ
Last Updated 14 ಅಕ್ಟೋಬರ್ 2019, 15:50 IST
ಅಕ್ಷರ ಗಾತ್ರ

ಶಿರಸಿ: ಶೈಕ್ಷಣಿಕ ಚಟುವಟಿಕೆಯಲ್ಲಿ ಯೋಗವನ್ನು ಸೇರ್ಪಡೆಗೊಳಿಸುವಂತೆ ಶಿಕ್ಷಣ ಸಚಿವರ ಜೊತೆ ಚರ್ಚಿಸಲಾಗುವುದು ಎಂದು ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.

ನಗರದ ಜೆ.ಎಂ.ಜೆ ಕಾಲೇಜಿನಲ್ಲಿ ಸೋಮವಾರದಿಂದ ಎರಡು ದಿನ ಆಯೋಜಿಸಿರುವ ಬೆಳಗಾವಿ ವಿಭಾಗ ಮಟ್ಟದ ಶಾಲಾ ವಿದ್ಯಾರ್ಥಿಗಳ ಯೋಗಾಸನ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಮಾನವ ಆರೋಗ್ಯಕ್ಕೆ ಪೂರಕವಾದ ಯೋಗಾಸನದ ಬಗ್ಗೆ ಬಾಲ್ಯದಲ್ಲಿಯೇ ಮಕ್ಕಳಿಗೆ ಒಲವು ಮೂಡಿಸುವ ಪ್ರಯತ್ನ ಆಗಬೇಕು. ಯೋಗಕ್ಕೆ ವಿಶ್ವದಾದ್ಯಂತ ಆದ್ಯತೆ ಸಿಗುತ್ತಿದೆ. ಭಾರತೀಯರು ಇದರ ಮಹತ್ವ ಅರಿಯಬೇಕು’ ಎಂದರು.

ಜಿಲ್ಲಾ ಪಂಚಾಯ್ತಿ ಸದಸ್ಯರಾದ ಜಿ.ಎನ್.ಹೆಗಡೆ, ಬಸವರಾಜ ದೊಡ್ಮನಿ, ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ನಾಯಕ, ದೈಹಿಕ ಶಿಕ್ಷಣ ಪರಿವೀಕ್ಷಕ ವಸಂತ ಭಂಡಾರಿ, ಉಪನಿರ್ದೇಶಕ ಈಶ್ವರ ನಾಯಕ, ಪ್ರಮುಖರಾದ ಆರ್.ವಿ.ಹೆಗಡೆ, ಪ್ರಾಚಾರ್ಯೆ ಸಿಸ್ಟರ್ ಅಮಲಾ ಕರ್ನಮ್ ಇದ್ದರು. ಶಿಕ್ಷಣಾಧಿಕಾರಿ ಎಂ.ಎಸ್.ಹೆಗಡೆ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಅಶೋಕ ಭಜಂತ್ರಿ ನಿರೂಪಿಸಿದರು. ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ 250ಕ್ಕೂ ಹೆಚ್ಚು ಮಕ್ಕಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT