ತೈಲ ಬೆಲೆ ಏರಿಕೆ ವಿರುದ್ಧ ಡಿಕೆಶಿ ನೇತೃತ್ವದಲ್ಲಿ ಪ್ರತಿಭಟನೆ

ಶಿರಸಿ: ತೈಲ ಬೆಲೆ, ಅಡುಗೆ ಅನಿಲ ಬೆಲೆ ಏರಿಕೆ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಇಲ್ಲಿನ ಮಾರಿಕಾಂಬಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಸಾಂಕೇತಿಕವಾಗಿ ಸೈಕಲ್ ತುಳಿದು ಪ್ರತಿಭಟನೆಗೆ ಚಾಲನೆ ನೀಡಿದರು. ಹತ್ತಾರು ಕಾರ್ಯಕರ್ತರು ಸೈಕಲ್ ಮೆರವಣಿಗೆ ನಡೆಸಿದರು. ಮುಖಂಡರು ಕಾಲ್ನಡಿಗೆಯಲ್ಲಿ ಸಾಗಿದರು.
ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಸಾಗಿ ತೋಟಿಗರ ಕಲ್ಯಾಣ ಮಂಟಪದ ಎದುರು ಸಮಾಪ್ತಿಗೊಂಡಿತು. ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಲಾಯಿತು. ಡಿ.ಕೆ.ಶಿವಕುಮಾರ್ ಪರ ಘೋಷಣೆ ಮೊಳಗಿತು.
ಬೀದರ್ ಸಂಸದ ಭಗವಂತ ಖೂಬಾ ಕೇಂದ್ರ ಸಂಪುಟಕ್ಕೆ
ಮುಖಂಡರಾದ ಆರ್.ವಿ.ದೇಶಪಾಂಡೆ, ಬಿ.ಕೆ.ಹರಿಪ್ರಸಾದ್, ಪ್ರಶಾಂತ ದೇಶಪಾಂಡೆ, ಸತೀಶ್ ಸೈಲ್, ಮಂಕಾಳು ವೈದ್ಯ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಭೀಮಣ್ಣ ನಾಯ್ಕ ಇತರರು ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.