ಮಂಗಳವಾರ, ಅಕ್ಟೋಬರ್ 4, 2022
27 °C

ಪತ್ನಿಗೆ ಬೆಂಕಿ ಹಚ್ಚಿದ ಪತಿಯಿಂದ ಆತ್ಮಹತ್ಯೆ ಯತ್ನ

ಪ್ರಜಾವಾಣಿ ವಾರತೆ Updated:

ಅಕ್ಷರ ಗಾತ್ರ : | |

ಸಿದ್ದಾಪುರ: ತಾಲ್ಲೂಕಿನ ಕಾನಗೋಡ ಗ್ರಾಮದಲ್ಲಿ ಶುಕ್ರವಾರ, ಕುಡಿದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬಳಿಕ ತಾನು ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ. ತೀವ್ರ ಸ್ವರೂಪದಿಂದ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾನಗೋಡ ಗ್ರಾಮದ ಗಣೇಶ ನಗರ ನಿವಾಸಿ ಗುತ್ಯ ಸಣ್ಯಾ ಚೆನ್ನಯ್ಯ (50) ಎಂಬಾತ ಆರೋಪಿಯಾಗಿದ್ದಾನೆ. ಶುಕ್ರವಾರ ಮಧ್ಯಾಹ್ನ ವಿಪರೀತ ಮದ್ಯ ಕುಡಿದು ಮನೆಗೆ ಬಂದು ಹೆಂಡತಿ ರೇಣುಕಾ ಗುತ್ಯ ಚನ್ನಯ್ಯ (45) ಜೊತೆ ಜಗಳ ಮಾಡಿದ್ದ. ಬಳಿಕ ಕೃತ್ಯ ಎಸಗಿದ್ದಾನೆ.

ವಿಷಯ ತಿಳಿದ ಸ್ಥಳೀಯರು ‘108’ ಆಂಬುಲೆನ್ಸ್‌ಗೆ ಕರೆ ಮಾಡಿ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪತ್ನಿಯನ್ನು ಆಸ್ಪತ್ರೆಗೆ ಒಯ್ಯುತ್ತಿದ್ದಂತೆ ಗುತ್ಯ ಕೂಡ ವಿಷ ಕುಡಿದು ಆತ್ಮಹತ್ಯೆಗೆ ಪ್ರಯತ್ನ ಪಟ್ಟಿದ್ದಾನೆ. ಸ್ಥಳೀಯರು ಆತನನ್ನೂ ಖಾಸಗಿ ವಾಹನದ ಮೂಲಕ ಸಿದ್ದಾಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸಿದ್ದಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.