ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದವೀಧರರ ಕ್ಷೇತ್ರಕ್ಕೆ ಚುನಾವಣೆ 28ರಂದು

ನ.2ರಂದು ಮತ ಎಣಿಕೆ: ಕ್ಷೇತ್ರದಲ್ಲಿ ಒಟ್ಟು 72,926 ಮತದಾರರು
Last Updated 30 ಸೆಪ್ಟೆಂಬರ್ 2020, 14:19 IST
ಅಕ್ಷರ ಗಾತ್ರ

ಕಾರವಾರ: ಉತ್ತರ ಕನ್ನಡ ಜಿಲ್ಲೆಯನ್ನೂ ಒಳಗೊಂಡಿರುವ, ವಿಧಾನಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರಕ್ಕೆ ಚುನಾವಣೆ ಅ. 28ರಂದು ಮತದಾನ ನಿಗದಿಯಾಗಿದೆ. ಚುನಾವಣೆಗೆ ನಾಮ ನಿರ್ದೇಶನಗಳನ್ನು ಸಲ್ಲಿಸಲು ಅ. 8 ಕೊನೆಯ ದಿನವಾಗಿದೆ.

ಅ.1ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಅ.9ರಂದು ನಾಮ ನಿರ್ದೇಶನಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂಪಡೆಯಲು ಅ.12 ಕೊನೆಯ ದಿನವಾಗಿದೆ. ಅ.28ರಂದು ಬೆಳಿಗ್ಗೆ 8ರಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ನ.2ರಂದು ಮತ ಎಣಿಕೆಯಾಗಲಿದೆ. ನ.5ರವರೆಗೆ ನೀತಿ ಸಂಹಿತೆ ಜಾರಿಯಲ್ಲಿ ಇರಲಿದೆ.

ಈ ಚುನಾವಣೆಗೆ ಬೆಳಗಾವಿಯ ಪ್ರಾದೇಶಿಕ ಆಯುಕ್ತರು ಚುನಾವಣಾಧಿಕಾರಿಯಾಗಿದ್ದಾರೆ. ಪಶ್ಚಿಮ ಪದವೀಧರರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಉತ್ತರಕನ್ನಡ, ಧಾರವಾಡ, ಗದಗ, ಹಾವೇರಿ ಜಿಲ್ಲಾಧಿಕಾರಿಗಳು ಸಹಾಯಕ ಚುನಾವಣಾ ಅಧಿಕಾರಿಗಳಾಗಿರುತ್ತಾರೆ. ಧಾರವಾಡ ಜಿಲ್ಲಾಧಿಕಾರಿಯು ಅಭ್ಯರ್ಥಿಗಳ ನಾಮಪತ್ರ ಸ್ವೀಕರಿಸಲಿದ್ದಾರೆ. ಮೂರೂ ಜಿಲ್ಲೆಗಳಲ್ಲಿ ಒಟ್ಟು 72,926 ಮತದಾರರಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

––––

ಉತ್ತರ ಕನ್ನಡದಲ್ಲಿ ಮತದಾರರು

ತಾಲ್ಲೂಕು;ಮತದಾರರ ಸಂಖ್ಯೆ

ಕಾರವಾರ;1,657

ಅಂಕೋಲಾ;1,485

ಕುಮಟಾ;1,433

ಹೊನ್ನಾವರ;1,467

ಭಟ್ಕಳ;769

ಜೊಯಿಡಾ;179

ದಾಂಡೇಲಿ;660

ಹಳಿಯಾಳ;871

ಮುಂಡಗೋಡ;700

ಯಲ್ಲಾಪುರ;755

ಶಿರಸಿ;1,776

ಸಿದ್ದಾಪುರ;1,111

ಒಟ್ಟು;13,063

* ಮಾಹಿತಿ: ಜಿಲ್ಲಾಡಳಿತ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT