ಗುರುವಾರ , ಆಗಸ್ಟ್ 6, 2020
24 °C

ಪ್ರತಿ ತಾಲೂಕಿನಲ್ಲೂ ವಿದ್ಯುತ್ ಚಿತಾಗಾರ ಸ್ಥಾಪಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಾರವಾರ: ದೇಶದಾದ್ಯಂತ ಕೋವಿಡ್ 19ನಿಂದ ಮೃತರ ಶವಗಳನ್ನು ವಿದ್ಯುತ್ ಚಿತಾಗಾರದಲ್ಲೇ ಸುಡಬೇಕು ಎಂಬ ಬಗ್ಗೆ ನಿಯಮಾವಳಿ ರೂಪಿಸಬೇಕು. ಇದಕ್ಕಾಗಿ ಪ್ರತಿ ತಾಲ್ಲೂಕುಗಳಲ್ಲಿ ವಿದ್ಯುತ್ ಚಿತಾಗಾರಗಳನ್ನು ಸ್ಥಾಪಿಸಬೇಕು ಎಂದು ಜನಶಕ್ತಿ ವೇದಿಕೆಯ ಅಧ್ಯಕ್ಷ ಮಾಧವ ನಾಯಕ ಆಗ್ರಹಿಸಿದ್ದಾರೆ.

ಈ ಸಂಬಂಧ ಪ್ರಧಾನಮಂತ್ರಿ ಹಾಗೂ ರಾಷ್ಟ್ರಪತಿಗೆ ಅವರು ಪತ್ರ ಬರೆದಿದ್ದು, ಜಿಲ್ಲಾಧಿಕಾರಿ ಮೂಲಕ ಮಂಗಳವಾರ ಮನವಿ ಸಲ್ಲಿಸಿದ್ದಾರೆ. 

ದೇಶದಾದ್ಯಂತ ಕೋವಿಡ್‌ನಿಂದ ಮೃತರ ಶವಗಳನ್ನು ಅಗೌರವಯುತವಾಗಿ ಸಂಸ್ಕಾರ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದೆ. ಅದನ್ನು ಹೋಗಲಾಡಿಸಲು ವಿದ್ಯುತ್ ಚಿತಾಗಾರಗಳ ಸ್ಥಾಪನೆಯಿಂದ ಸಾಧ್ಯವಿದೆ. ಇದಕ್ಕೆ ಸ್ಮಶಾನದಂತೆ ಹೆಚ್ಚಿನ ಜಾಗ ಹಾಗೂ ಕಟ್ಟಿಗೆಯ ಅವಶ್ಯಕತೆಯಿಲ್ಲ. ಆದ್ದರಿಂದ ಕೇಂದ್ರ ಸರ್ಕಾರವು ಈ ಸಂಬಂಧ ನಿಯಮಾವಳಿ ರೂಪಿಸಿ, ಸರ್ಕಾರಿ ಜಾಗದಲ್ಲಿ ಚಿತಾಗಾರ ಆರಂಭಿಸಬೇಕು ಎಂದು ಒತ್ತಾಯಸಿದ್ದಾರೆ.

ಈ ಕ್ರಮದಿಂದ ಮೃತರ ಕುಟುಂಬ ಸದಸ್ಯರಿಗೆ ತಕ್ಕಮಟ್ಟಿಗೆ ಸಾಂತ್ವನ ಹೇಳಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಕಾಶಿನಾಥ, ಸಂದೇಶ ಎಸ್ ಹಾಗೂ ಅನು ಕಳಸ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.